ದೇಶ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿಯೂ ಪತಂಜಲಿ ಉತ್ಪನ್ನಗಳಿಗೆ ಹೆಚ್ಚಿದ ಬೇಡಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಬಾ ರಾಮದೇವ್ ಮತ್ತು ಆಚಾರ್ಯ ಬಾಲಕೃಷ್ಣ ಅವರ ತಂತ್ರಗಳು ಯಶಸ್ವಿಯಾಗಲು ಪ್ರಾರಂಭಿಸಿವೆ. ಪತಂಜಲಿ ಉತ್ಪನ್ನಗಳು ಇ-ಕಾಮರ್ಸ್ ಪ್ಲಾಟ್​​ಫಾರ್ಮ್​​ಗಳ ಮೂಲಕ ವಿಶ್ವದ ಹಲವು ದೇಶಗಳನ್ನು ತಲುಪುತ್ತಿವೆ. ಪತಂಜಲಿ ಉತ್ಪನ್ನಗಳನ್ನು ವಿದೇಶಗಳಲ್ಲಿ ವಾಸಿಸುವ ಭಾರತೀಯರು ಹೆಚ್ಚು ಇಷ್ಟಪಡುತ್ತಿದ್ದಾರೆ ಎನ್ನಲಾಗಿದೆ.

ಪತಂಜಲಿ ಆಯುರ್ವೇದ ಸಂಸ್ಥೆಯು ಈಗ ದೇಶದಲ್ಲಿ ಮಾತ್ರವಲ್ಲದೆ ಜಾಗತಿಕ ಮಟ್ಟದಲ್ಲಿಯೂ ಸದ್ದು ಮಾಡುತ್ತಿದೆ. ಪತಂಜಲಿ ಆಯುರ್ವೇದವು ಭಾರತೀಯ ಸಾಂಪ್ರದಾಯಿಕ ಔಷಧ ಮತ್ತು ಆಯುರ್ವೇದವನ್ನು ಉತ್ತೇಜಿಸುವ ಜಾಗತಿಕ ಶಕ್ತಿಯಾಗಿ ಹೊರಹೊಮ್ಮಿದೆ.

ಭಾರತ ಮತ್ತು ಪ್ರಪಂಚದ ಹಲವು ದೇಶಗಳಲ್ಲಿ ಕೋಟ್ಯಂತರ ಜನರು ಪತಂಜಲಿ ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ಅಮೆರಿಕ ಮತ್ತು ಬ್ರಿಟನ್‌ನಂತಹ ದೇಶಗಳಲ್ಲಿ ತನ್ನ ಉಪಸ್ಥಿತಿಯನ್ನು ಹೆಚ್ಚಿಸಲು ಯೋಜಿಸಿದೆ. ಇದಲ್ಲದೆ, ಪತಂಜಲಿ ಉತ್ಪನ್ನಗಳು ಆನ್‌ಲೈನ್​​ನಿಂದ ಗ್ರಾಹಕರಿಗೆ ಸುಲಭವಾಗಿ ಲಭ್ಯವಿದೆ.

 

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!