Sunday, November 27, 2022

Latest Posts

ಮುರುಘಾ ಶರಣರಿಗೆ ಹೆಚ್ಚಿದ ಸಂಕಷ್ಟ: ಮತ್ತಿಬ್ಬರು ಬಾಲಕಿಯರಿಂದ ದೂರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಬಾಲಕಿಯರಿಗೆ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆಯಡಿ ಬಂಧಿತರಾಗಿರುವ  ಮುರುಘಾ ಶರಣರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಮುರುಘಾಶ್ರೀ ವಿರುದ್ಧ ಮತ್ತಿಬ್ಬರು ಬಾಲಕಿಯರು ದೂರು ದಾಖಲಿಸಿದ್ದಾರೆ.
ಮಠದಲ್ಲಿ ಕೆಲಸ ಮಾಡುತ್ತಿದ್ದ ನೌಕರರ ಮಕ್ಕಳ ಮೇಲೆ ಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ ದೂರು ದಾಖಲಾಗಿದೆ.  ಬಾಲಕಿಯರು ಮೈಸೂರಿನ ನಜರಾಬಾದ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ್ದು, ಇಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಲಿದೆ.
ಮೈಸೂರು ಪೊಲೀಸರು ಈ ಬಗ್ಗೆ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಮಾಹಿತಿ ನೀಡಿದ್ದು, ಎಫ್‌ಐಆರ್ ಕಾಪಿ ಕಳುಹಿಸಿದ ಬಳಿಕ ಚಿತ್ರದುರ್ಗ ಠಾಣೆಗೆ ಪ್ರಕರಣ ವರ್ಗಾವಣೆ ಆಗಲಿದೆ. ಸಧ್ಯ, ಫೋಕ್ಸೋ ಪ್ರಕರಣದಲ್ಲಿ ಮುರುಘಾಶ್ರೀ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!