Wednesday, August 10, 2022

Latest Posts

ರಾಜ್ಯದಲ್ಲಿ ಹೆಚ್ಚಿದ ಕೊರೋನಾ ಸೋಂಕಿತರ ಸಂಖ್ಯೆ: ಗುರುವಾರ 783 ಜನರಿಗೆ ಪಾಸಿಟಿವ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ರಾಜ್ಯದಲ್ಲಿ ಗುರುವಾರ 783 ಜನರಿಗೆ ಕೊರೋನಾ ವೈರಸ್ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ
957584ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 2 ಮಂದಿ ಕೋವಿಡ್-19 ಸೋಂಕಿಗೆ ಬಲಿಯಾಗಿದ್ದು, ಈವರೆಗೂ 12381 ಜನರು ಕೊರೋನಾಗೆ
ಬಲಿಯಾಗಿದ್ದಾರೆ. ರಾಜ್ಯದಲ್ಲಿ 7831 ಕೊರೋನಾ ವೈರಸ್ ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ
ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕರ್ನಾಟಕದಲ್ಲಿ ಒಂದು ದಿನದಲ್ಲಿ 406 ಸೋಂಕಿತರು ಗುಣಮುಖರಾಗಿದ್ದು, ಇದುವರೆಗೂ 957584 ಸೋಂಕಿತರು ಗುಣಮುಖರಾಗಿ
ದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 492 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದ್ದು,
ಈ ಮೂಲಕ ಸೋಂಕಿತರ ಸಂಖ್ಯೆ 409655 ಕ್ಕೆ ಏರಿಕೆಯಾಗಿದ. ಬೆಂಗಳೂರಿನಲ್ಲಿ ಇಂದು ಇಬ್ಬರು ಬಲಿಯಾಗಿದ್ದು, ಸಾವಿನ ಸಂಖ್ಯೆ 4514 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss