ರಾಜ್ಯದಲ್ಲೂ ಹೆಚ್ಚಿದ ಕೋವಿಡ್ ಕೇಸ್: ಬೂಸ್ಟರ್ ಡೋಸ್‌ಗಳತ್ತ ಚಿತ್ತನೆಟ್ಟಿದ್ದಾರೆ ನಾಗರಿಕರು

ಹೊಸದಿಗಂತ ಡಿಜಿಟಲ್ ಡೆಸ್ಕ್:

ದೇಶದಲ್ಲಿ ಕೋವಿಡ್ ಪ್ರಕರಣ ಏರಿಕೆ ಕಾಣುತ್ತಿರುವ ಬೆನ್ನಲ್ಲೇ ರಾಜ್ಯದಲ್ಲಿಯೂ ಜನತೆ ಅಲರ್ಟ್ ಆಗಿದ್ದು, ಬೂಸ್ಟರ್ ಡೋಸ್‌ಗಳತ್ತ ಚಿತ್ತಹರಿಸಿದ್ದಾರೆ.

ಶುಕ್ರವಾರ ಒಂದೇ ದಿನ 14,300 ಮಂದಿ ಬೂಸ್ಟರ್ ಡೋಸ್ ಪಡೆದಿರುವುದು ಅಂಕಿ ಅಂಶಗಳು ಸ್ಪಷ್ಟಪಡಿಸಿವೆ.

ಇನ್ನು ರಾಜ್ಯದಲ್ಲಿ ಲಸಿಕೆಗಳ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆ ಕೋವಿಶೀಲ್ಡ್ ಒದಗಿಸಿಲು ಈಗಾಗಲೇ ಕೇಂದ್ರ ಸರ್ಕಾರಕ್ಕೆ ಕೋರಿದೆ. ಮೂಲಗಳ ಪ್ರಕಾರ ರಾಜ್ಯದಲ್ಲಿ ಸುಮಾರು 7.2 ಲಕ್ಷ ಡೋಸ್ ಕೋವ್ಯಾಕ್ಸಿನ್ ಇದೆ. ಜೊತೆಗೆ 30 ಲಕ್ಷದಷ್ಟು ಡೋಸ್ ಕೋವಿಶೀಲ್ಡ್ ಸಂಗ್ರಹಿಸಲು ಸಿದ್ಧತೆ ನಡೆಯುತ್ತಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿಯೂ ಜನತೆ ಅಲರ್ಟ್ ಆಗಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಆಸ್ಪತ್ರೆಗಳಲ್ಲಿ ಕಳೆದ ಎರಡು ವಾರಗಳಲ್ಲಿ 25,000 ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!