ಹೊಸದಿಗಂತ ಡಿಜಿಟಲ್ ಡೆಸ್ಕ್:
ಹುಬ್ಬಳ್ಳಿಯ ನೇಹಾ ಹಿರೇಮಠ ಮತ್ತು ಅಂಜಲಿ, ಕೊಡಗಿನಲ್ಲಿ ಎಸ್ಎಲ್ಸಿ ವಿದ್ಯಾರ್ಥಿನಿ ಮೀನಾ ಹತ್ಯೆ, ಗುರುವಾರ ಬೆಂಗಳೂರಿನ ಮನೆಯೊಂದರಲ್ಲಿ ಯುವತಿಯ ಶವ ಪತ್ತೆ ಪ್ರಕರಣಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಗೆ ಕಾರಣವಾಗಿವೆ.
ಇದೀಗ ಈ ಪ್ರಕರಣಗಳ ಬೆನ್ನಲೇ ಮತ್ತೊಬ್ಬ ಯುವತಿಯ ಶವ ಅನುಮಾನಾಸ್ಪದವಾಗಿ ಪತ್ತೆಯಾಗಿದೆ. ಬೆಂಗಳೂರು ಹೊರವಲಯದ ಚಂದಾಪುರ ಸಮೀಪದ ಬಿಸಿಇಟಿ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದಲ್ಲಿ 18 ವರ್ಷದ ವಿದ್ಯಾರ್ಥಿನಿ ಹರ್ಷಿತಾ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಈ ಪ್ರಕರಣದ ಕುರಿತು ಹೆಚ್ಚಿನ ವಿವರ ಲಭ್ಯವಾಗಬೇಕಿದೆ.