August 15, 2026
Saturday, August 15, 2026
spot_img

WEATHER | ರಾಜ್ಯದಲ್ಲಿ ಬಿಸಿಲು ಹೆಚ್ಚಳ, ಆರೋಗ್ಯ ಜೋಪಾನ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ರಾಜ್ಯದಲ್ಲಿ ಬಿಸಿಲಿನ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಬಿಸಿಲಿನಿಂದ ಕೂಡಿದ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಬಿಸಿಲು ಹೆಚ್ಚಳವಾಗಿದ್ದು, ವಯಸ್ಸಾದವರು, ಗರ್ಭಿಣಿ, ಮಕ್ಕಳು ಮಧ್ಯಾಹ್ನ 12ರಿಂದ 4 ಗಂಟೆವರೆಗೆ ಮನೆಯಲ್ಲಿಯೇ ಇರುವುದು ಸೂಕ್ತ. ದೇಹ ಹೈಡ್ರೇಟ್‌ ಆಗಿರಲು ಸದಾ ನೀರನ್ನು ಕುಡಿಯಿರಿ, ಜಂಕ್‌ ಫುಡ್‌ ಬಳಕೆ ಬೇಡ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !