Sunday, April 18, 2021

Latest Posts

ಕೇರಳದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು: ನಾಳೆಯಿಂದ ಕಠಿಣ ನಿರ್ಬಂಧ ಜಾರಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಕೇರಳ ವಿಧಾನಸಭಾ ಚುನಾವಣೆಗೆ ಮತದಾನ ಮುಗಿಯುತ್ತಿದ್ದಂತೆಯೇ , ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಪ್ರಕರಣಗಳ ಬಗ್ಗೆ ಸರಕಾರ ಮತ್ತೆ ಗಮನ ಹರಿಸಿದ್ದು, ಗುರುವಾರದಿಂದ (ಇಂದು) ಕಠಿಣ ನಿರ್ಬಂಧಗಳನ್ನು ಜಾರಿಗೆ ತರಲು ಮುಂದಾಗಿದೆ. ರಾಜ್ಯದಲ್ಲಿ ಬುಧವಾರ 3500ಕ್ಕೂ ಅಧಿಕ ಪ್ರಕರಣಗಳು ವರದಿಯಾಗಿವೆ.
ಕೇರಳದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿರುವುದು ಸೇರಿದಂತೆ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದನ್ನು ಖಾತ್ರಿಗೊಳಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಮುಖ್ಯ ಕಾರ್ಯದರ್ಶಿಯವರ ನೇತೃತ್ವದಲ್ಲಿ ಬುಧವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕು ಪ್ರಕರಣಗಳು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಕಠಿಣ ಕ್ರಮಗಳ ಅಗತ್ಯವನ್ನು ಒತ್ತಿ ಹೇಳಲಾಗಿದೆ.ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಪಾಸಿಟಿವಿಟಿ ದರ ಶೇ.5ಕ್ಕೇರಿದೆ.
ಮಂಗಳವಾರ ವಿಧಾನಸಭಾ ಚುನಾವಣೆಗೆ ಮತದಾನ ಮುಗಿದಿದ್ದು, ಎಲ್ಲ ಮತಗಟ್ಟೆ ಏಜೆಂಟರನ್ನೂ ತಕ್ಷಣ ಕೋವಿಡ್ ಪರೀಕ್ಷೆಗೊಳಪಡುವಂತೆ ಸೂಚಿಸಲಾಗಿದೆ.ಮುಂದಿನ ಕೆಲವು ದಿನಗಳಲ್ಲಿ ಒಂದು ಲಕ್ಷ ಜನರನ್ನು ಪರೀಕ್ಷೆಗೊಳಪಡಿಸಲಾಗುವುದು ಎಂದೂ ಮೂಲಗಳು ತಿಳಿಸಿವೆ. ಅಲ್ಲದೆ ಚುನಾವಣೆ ಸಮಯದಲ್ಲಿ ರಾಜ್ಯಕ್ಕೆ ಆಗಮಿಸಿದ ಹೊರಗಿನವರನ್ನು ಕ್ವಾರಂಟೈನ್‌ಗೆ ಕಡ್ಡಾಯವಾಗಿ ಒಳಪಡಿಸುವ ಕ್ರಮ ಸರಿಯಾಗಿ ಪಾಲನೆಯಾಗಿಲ್ಲ. ಇನ್ನು ಮುಂದೆ ಇದನ್ನು ಕಟ್ಟುನಿಟ್ಟುಗೊಳಿಸಲು ಸೂಚಿಸಲಾಗಿದೆ.

 

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss