ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಕೇರಳದಲ್ಲಿ ಕೊರೋನಾ ಸೋಂಕಿನ ಪ್ರಮಾಣ ದಿನೇ ದಿನೇ ಹೆಚ್ಚುತ್ತಿದ್ದು, ಈ ಹಿನ್ನಲೆಯಲ್ಲಿ ಸಂಡೇ ಲಾಕ್ ಡೌನ್ ಜೊತೆಗೆ ಸೋಮವಾರದಿಂದ ನೈಟ್ ಕರ್ಫ್ಯೂ ಜಾರಿ ಮಾಡವುದಾಗಿ ಸಿಎಂ ಘೋಷಿಸಿದ್ದಾರೆ.
ಕೇರಳ ಸರ್ಕಾರ ಸೋಮವಾರದಿಂದ ಜಾರಿಗೆ ಬರುವಂತೆ ನೈಟ್ ಕರ್ಫ್ಯೂ ವಿಧಿಸಿದೆ. ಹೊಸ ಆದೇಶವನ್ನು ಹೊರಡಿಸಿದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೊರಡಿಸಿದ್ದು, ರಾತ್ರಿ ಕರ್ಫ್ಯೂ ಅನ್ನು ಸೋಮವಾರದಿಂದ ಪ್ರತಿದಿನ ರಾತ್ರಿ 10 ರಿಂದ ಬೆಳಿಗ್ಗೆ 6 ರವರೆಗೆ ವಿಧಿಸಲಾಗುವುದು ಎಂದು ಹೇಳಿದರು.
ಲಾಕ್ಡೌನ್ ಸಡಿಲಿಕೆಗಳಿಂದಾಗಿ, ಪ್ರಕರಣಗಳಲ್ಲಿ ಏರಿಕೆ ಕಂಡುಬಂದಿದೆ. ಓಣಂ ನಂತರ ಇದು ಮತ್ತಷ್ಟು ಹೆಚ್ಚಾಗಿದೆ. ಇದನ್ನು ನಿರೀಕ್ಷಿಸಿ ರಾಜ್ಯದಲ್ಲಿ ಚಿಕಿತ್ಸಾ ಸೌಲಭ್ಯ ಹೆಚ್ಚಿಸಿದ್ದೇವೆ ಎಂದು ಸಿಎಂ ಹೇಳಿದರು.
ಶನಿವಾರ 31,265 ಕೋವಿಡ್ ಪಾಸಿಟಿವ್ ವರದಿ ಬಂದಿದೆ. 153 ಸಾವುಗಳು ವರದಿಯಾಗಿವೆ.
ಕಳೆದ ಕೆಲವು ದಿನಗಳಲ್ಲಿ ಕೇರಳವು ಒಟ್ಟು 30,000 ಕ್ಕಿಂತ ಹೆಚ್ಚು ಪ್ರಕರಣ ವರದಿಯಾಗುತ್ತಿದ್ದು, ಪಾಸಿಟಿವಿಟಿ ದರ ಶೇಕಡ 19 ರಷ್ಟು ದಾಟಿದೆ.