spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 27, 2022

Latest Posts

ಕೊಡಗಿನಲ್ಲೂ ಹೆಚ್ಚುತ್ತಿರುವ ಕೊರೋನಾ ಸೋಂಕು: 58 ಹೊಸ ಪ್ರಕರಣಗಳು ದೃಢ

ದಿಗಂತ ವರದಿ ಮಡಿಕೇರಿ:

ಕರ್ನಾಟಕದ ಕಾಶ್ಮೀರ ಖ್ಯಾತಿಯ ಕೊಡಗು ಜಿಲ್ಲೆಯಲ್ಲೂ ಕೊರೋನಾ ಸೋಂಕಿನ ಪ್ರಮಾಣ ದಿನೇದಿನೇ ಹೆಚ್ಚುತ್ತಿದ್ದು, ಗುರುವಾರ 58 ಹೊಸ ಪ್ರಕರಣಗಳು ದೃಢಪಟ್ಟಿವೆ.
ಮಡಿಕೇರಿ ತಾಲೂಕಿನಲ್ಲಿ 19, ವೀರಾಜಪೇಟೆ ತಾಲ್ಲೂಕಿನಲ್ಲಿ 12, ಸೋಮವಾರಪೇಟೆ ತಾಲೂಕಿನಲ್ಲಿ 27 ಹೊಸ ಪ್ರಕರಣಗಳು ಕಳೆದ 24 ಗಂಟೆಗಳಲ್ಲಿ ಪತ್ತೆಯಾಗಿದೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 36,253 ರಷ್ಟಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಇಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇದುವರೆಗೆ ಒಟ್ಟು 35,429 ಮಂದಿ ಗುಣಮುಖರಾದಂತಾಗಿದ್ದು, ಒಟ್ಟು 438 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 386 ಸಕ್ರಿಯ ಪ್ರಕರಣಗಳಿದ್ದು, ಕಂಟೈನ್‍ಮೆಂಟ್ ವಲಯಗಳ ಸಂಖ್ಯೆ 69 ಹಾಗೂ ಕೋವಿಡ್ ಪಾಸಿಟಿವಿಟಿ ದರ ಶೇ.1.48ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap