ರಾಜ್ಯದಲ್ಲಿ ಹೆಚ್ಚುತ್ತಿದೆ ಕೊರೋನಾ ಸೋಂಕಿನ ಪ್ರಮಾಣ: ಇಂದು 1187 ಮಂದಿಗೆ ಪಾಸಿಟಿವ್

ಹೊಸದಿಗಂತ ವರದಿ,ಮಡಿಕೇರಿ:

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಮತ್ತೆ ಏರಿಕೆಯಾಗುತ್ತಿದ್ದು, ಇಂದು 1187 ಮಂದಿಗೆ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 30,09,557 ಕ್ಕೆ ಏರಿಕೆ ಆಗಿದೆ‌. ಇಂದು 275 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದಾರೆ. ಇಲ್ಲಿಯವರೆಗೂ 29,60,890 ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಇಂದು 6 ಮಂದಿಯನ್ನು ಸೋಂಕಿಗೆ ಸಾವನ್ನಪ್ಪಿದ್ದು, ಈ ಮೂಲಕ 38,346 ಕ್ಕೆ ಸಾವಿನ ಸಂಖ್ಯೆ ಏರಿಕೆ ಕಂಡಿದೆ. ಸದ್ಯ 10,292 ಸಕ್ರಿಯ ಪ್ರಕರಣಗಳಿವೆ. ಈ ಮೂಲಕ ಸೋಂಕಿತರ ಪ್ರಮಾಣ ಶೇ‌.1.08 ರಷ್ಟು ಇದ್ದು, ಸಾವಿನ ಪ್ರಮಾಣ ಶೇ.0.50 ರಷ್ಟು ಇದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!