ಹೊಸ ದಿಗಂತ ಆನ್ ಲೈನ್ ಡೆಸ್ಕ್:
ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 23,285 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 23,285 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 1,13,08,846ಕ್ಕೆ ಏರಿಕೆಯಾಗಿದೆ.
ನಿನ್ನೆ ಒಂದೇ ದಿನ ದೇಶದಲ್ಲಿ 15,157 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,09,53,303ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 1,97,237 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 117 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,58,306ಕ್ಕೆ ಏರಿಕೆಯಾಗಿದೆ.