Sunday, June 26, 2022

Latest Posts

ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ: ನಿನ್ನೆ ಪತ್ತೆಯಾದ ಹೊಸ ಪ್ರಕರಣ ಎಷ್ಟು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1,61,736 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,61,736 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 1,36,89,453ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 97,168 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,22,53,697ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 12,64,698 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 879 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,71,058 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss