Tuesday, June 28, 2022

Latest Posts

ನಿನ್ನೆ ದೇಶದಲ್ಲಿ 2.73 ಲಕ್ಷಕ್ಕೂ ಹೆಚ್ಚು ಕೊರೋನಾ ಪ್ರಕರಣ ಪತ್ತೆ: ಸೋಂಕಿಗೆ ಒಟ್ಟು ಬಲಿಯಾದವರೆಷ್ಟು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 2,73,810 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,73,810 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಒಟ್ಟಾರೆ ಸೋಂಕಿತರ ಸಂಖ್ಯೆ 1,50,61,919ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 1,44,178 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,29,53,821 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 19,29,329 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 1,619 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,78,769 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss