ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Tuesday, June 22, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ದೇಶದಲ್ಲಿ ಕೊರೋನಾ ಮಹಾ ಸ್ಫೋಟ: ಒಂದೇ ದಿನ ಸೋಂಕಿಗೆ ಬಲಿಯಾದವರೆಷ್ಟು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ 3,79,257 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,79,257 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಒಟ್ಟಾರೆ ಸೋಂಕಿತರ ಸಂಖ್ಯೆ 1,83,76,524ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 2,69,507 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ1,50,86,878 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 30,84,814 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 3645 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,04,832 ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss