ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, May 9, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

COVID-19 UPDATE: ಕೊರೋನಾ ನಿರ್ಲಕ್ಷ್ಯಿಸುವ ಮುನ್ನ ನಿನ್ನೆ ಸೋಂಕಿಗೆ ಬಲಿಯಾದವರೆಷ್ಟು ತಿಳಿಯಿರಿ…

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 3,92,488 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 3,92,488 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಒಟ್ಟಾರೆ ಸೋಂಕಿತರ ಸಂಖ್ಯೆ 1,95,57,457ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 3,07,865 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,59,92,271ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 33,49,644 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 3689 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,15,542 ಕ್ಕೆ ಏರಿಕೆಯಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss