Friday, July 1, 2022

Latest Posts

ಇನ್ನೂ ಜಾಗರೂಕರಾಗದಿದ್ರೆ ಮಸಣ ಗ್ಯಾರೆಂಟಿ.. ನಿನ್ನೆ ದಾಖಲಾದ ಕೊರೋನಾ ಸೋಂಕಿತರ ಸಂಖ್ಯೆ ಎಷ್ಟು ಗೊತ್ತಾ?

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………………………………..

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 4,12,262 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 4,12,262 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಒಟ್ಟಾರೆ ಸೋಂಕಿತರ ಸಂಖ್ಯೆ 2,06,65,148ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 3,29,113 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,69,51,731 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 34,87,229
ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 3,980 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,26,188ಕ್ಕೆ ಏರಿಕೆಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss