Sunday, April 18, 2021

Latest Posts

ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಏರಿಕೆ: ನಿನ್ನೆ ದೇಶದಲ್ಲಿ ಪತ್ತೆಯಾದ ಹೊಸ ಪ್ರಕರಣ ಎಷ್ಟು?

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 1,26,789 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.

ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,26,789 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು,  ಒಟ್ಟಾರೆ ಸೋಂಕಿತರ ಸಂಖ್ಯೆ1,29,28,574ಕ್ಕೆ ಏರಿಕೆಯಾಗಿದೆ.

ನಿನ್ನೆ ಒಂದೇ ದಿನ ದೇಶದಲ್ಲಿ 59,258 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ1,18,51,393ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 9,10,319 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ನಿನ್ನೆ ಒಂದೇ ದಿನ ದೇಶಾದ್ಯಂತ 685 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,66,862 ಕ್ಕೆ ಏರಿಕೆಯಾಗಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

spot_imgspot_img

Don't Miss