ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ವಿದ್ಯುತ್ ದರ ಪ್ರತಿ ಯೂನಿಟ್ಗೆ 36 ಪೈಸೆ ಹೆಚ್ಚಳ ಮಾಡಿದೆ. ಎಪ್ರಿಲ್ 1 ರಿಂದಲೇ ಹೊಸ ಆದೇಶ ಜಾರಿಯಾಗಲಿದೆ.
ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದು, ಕಾಂಗ್ರೆಸ್ ಸರ್ಕಾರ ಪಿಕ್ ಪಾಕೆಟ್ ಸರ್ಕಾರ. ಚುನಾವಣೆ ಸಮಯದಲ್ಲಿ ಜನರಿಗೆ ಸಿಹಿ ಮಾತುಗಳನ್ನಾಡಿ ಮತ ಪಡೆದ ಕಾಂಗ್ರೆಸ್, ಈಗ ಬೆಲೆ ಏರಿಕೆ ರೂಪದಲ್ಲಿ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.
ಒಂದು ಕಡೆ ಉಚಿತ ಕೊಟ್ಟಂತೆ ನಾಟಕವಾಡಿ, ಇನ್ನೊಂದು ಕಡೆ ಬೆಲೆ ಏರಿಕೆ ಮಾಡಿ ಜನರನ್ನ ದೋಚುತ್ತಿದ್ದಾರೆ. ವಿದ್ಯುತ್ ದರವನ್ನ ಪ್ರತಿ ಯೂನಿಟ್ ಗೆ 36 ಪೈಸೆ ಹೆಚ್ಚಿಸಿರೋದು ಜನರಿಗೆ ಮಾಡಿದ ದ್ರೋಹ. ಈ ತೀರ್ಮಾನವನ್ನ ಸರ್ಕಾರ ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.