ದೇಶದಲ್ಲಿ ಹೆಚ್ಚುತ್ತಿದೆ ಮತ್ತೆ ಕೊರೋನಾ: ಪಂಚ ರಾಜ್ಯಗಳಿಗೆ ಎಚ್ಚರಿಕೆ ನೀಡಿದ ಕೇಂದ್ರ ಸರಕಾರ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ದೇಶದಲ್ಲಿ ಕೊರೋನಾ ಪ್ರಮಾಣ ಮತ್ತೆ ಏರಿಕೆ ಕಾಣುತ್ತಿದ್ದು, ಇದರ ಬೆನ್ನಲ್ಲೇ ಕೇಂದ್ರ ಸರ್ಕಾರ 5 ರಾಜ್ಯಗಳಿಗೆ ಎಚ್ಚರಿಕೆ ನೀಡಿದೆ.
ಕರ್ನಾಟಕ, ತಮಿಳುನಾಡು, ಮಹಾರಾಷ್ಟ್ರ, ತೆಲಂಗಾಣ ಹಾಗೂ ಕೇರಳ ರಾಜ್ಯಗಳಿಗೆ ಕೇಂದ್ರ ಸರ್ಕಾರ ಪತ್ರ ಬರೆದಿದೆ. ಕೋವಿಡ್ ಹೆಚ್ಚಾಗುತ್ತಿರುವ ಕಾರಣ ತೀವ್ರ ನಿಗಾವಹಿಸುವಂತೆ ಸೂಚಿಸಿದೆ. ಜಿನೋಮ್ ಸೀಕ್ವೆನ್ಸ್ ಪರೀಕ್ಷೆ. ಕೋವಿಡ್ ಪರೀಕ್ಷೆ ಹೆಚ್ಚಿಸುವಂತೆ ರಾಜ್ಯಗಳಿಗೆ ಸೂಚಿಸಿದೆ. ಇದೇ ಶೀತ, ಕೆಮ್ಮು, ಜ್ವರ ಕಾಣಿಸಿದರೂ ಸೂಕ್ತ ಚಿಕಿತ್ಸೆ ಜೊತೆಗೆ ಕೋವಿಡ್ ಪರೀಕ್ಷೆ ಮಾಡಿಸಲು ಸೂಚಿಸಿದೆ.
ಇನ್ನು ಕೊರೋನಾ ಮಾರ್ಗಸೂಚಿಗಳನ್ನು ಕಟ್ಟು ನಿಟ್ಟಾಗಿ ಪಾಲಿಸಲು ಸೂಚಿಸಲಾಗಿದೆ. ಕ್ವಾರಂಟೈನ್ ಮೂಲಕ ಪ್ರಕರಣ ಹರಡದಂತೆ ತಡೆಯಲು ಸೂಚಿಸಲಾಗಿದೆ.
ದೇಶದಲ್ಲಿ 3 ತಿಂಗಳ ಬಳಿಕ ಪ್ರತಿ ದಿನದ ಕೋವಿಡ್ ಪ್ರಕರಣ 4,000 ಗಡಿ ದಾಟಿದೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 4,041 ಕೋವಿಡ್ ಪ್ರಕರಣ ದಾಖಲಾಗಿದೆ. 10ಜನ ಕೋವಿಡ್‌ಗೆ ಬಲಿಯಾಗಿದ್ದಾರೆ.
ಇತ್ತ ಬೆಂಗಳೂರಿನಲ್ಲಿ ಕೇವಲ ಐದು ದಿನದ ಅಂತರದಲ್ಲಿ ಮತ್ತೆ 200ಕ್ಕೂ ಅಧಿಕ ಕೊರೋನಾ ಸೋಂಕು ಪ್ರಕರಣ ಪತ್ತೆಯಾಗಿರುವುದು ಬೆಂಗಳೂರಿಗರಲ್ಲಿ ಆತಂಕ ಹೆಚ್ಚಿಸಿದೆ.
ಮಹಾರಾಷ್ಟ್ರ, ಕೇರಳದಲ್ಲಿ ಕೋವಿಡ್ ಹೆಚ್ಚಳ
ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡುಬಂದಿದ್ದು, ಜೂನ್ 2 ರಂದುಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ಒಟ್ಟು 3712 ಹೊಸ ಕೋವಿಡ್‌ ಪ್ರಕರಣಗಳು ದಾಖಲಾಗಿತ್ತು. ಇಂದು 4,000 ಗಡಿ ದಾಟಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!