Friday, March 5, 2021

Latest Posts

ಉಪ್ಪಿನಂಗಡಿ ಭಾಗದಲ್ಲಿ ಹೆಚ್ಚುತ್ತಿರುವ ಕಾಮುಕರ ಕಾಟ: ಆತಂಕದಲ್ಲಿ‌ ಜನತೆ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಕರಾವಳಿಯಲ್ಲಿ ಮತ್ತೆ ಶಾಂತಿ ಕದಡುವ ಹುನ್ನಾರ ವ್ಯವಸ್ಥಿತವಾಗಿ ನಡೆಯುತ್ತಿದೆಯೇ?
ಹೀಗೊಂದು ಅನುಮಾನವನ್ನು ಉಪ್ಪಿನಂಗಡಿ ಪರಿಸರದ ನಾಗರಿಕರು ವ್ಯಕ್ತಪಡಿಸುತ್ತಿದ್ದಾರೆ.
ಹಿಂದು ಯುವತಿಯರಿಗೆ ಕಿರುಕುಳ ನೀಡುವ ಪ್ರಕರಣ ಹೆಚ್ಚುತ್ತಿದ್ದು, ಬಸ್‌ನಲ್ಲಿ ಓಡಾಡುವ ಹೆಣ್ಣುಮಕ್ಕಳನ್ನು ಟಾರ್ಗೆಟ್ ಮಾಡಲಾಗುತ್ತಿದೆ.
ಇತ್ತೀಚೆಗಷ್ಟೇ ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯೊಬ್ಬಳಿಗೆ ರಫೀಕ್ ಎಂಬಾತ ಚುಡಾಯಿಸಿದ್ದಾನೆ. ಇದಕ್ಕೆ ವಿದ್ಯಾರ್ಥಿನಿಯ ಸಂಬಂಧಿ ವಿರೋಧಿಸಿದ್ದು, ಮುಂದುವರಿದ ಭಾಗವಾಗಿ ಬಸ್ ನಿಲ್ದಾಣದಲ್ಲಿ ಅವರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ.
ಸೋಮವಾರ ಈ ಪ್ರಕರಣ ನಡೆದಿದ್ದು, ಮಂಗಳವಾರವೂ ಇಂಥದ್ದೇ ಪ್ರಕರಣ ಮರುಕಳಿಸಿದೆ. ಉಪ್ಪಿನಂಗಡಿಯಿಂದ ಧರ್ಮಸ್ಥಳದತ್ತ ಸಂಚರಿಸುತ್ತಿದ್ದ ಬಸ್‌ನಲ್ಲಿ ಕಾಮುಕನೊಬ್ಬ ವಿದ್ಯಾರ್ಥಿನಿ ಬಳಿ ಅಸಭ್ಯವಾಗಿ ವರ್ತಿಸಿದ್ದು, ಈ ಬಗ್ಗೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇಷ್ಟಕ್ಕೇ ಮುಗಿಯದೇ ಸೋಮವಾರ ಬೆಳ್ತಂಗಡಿಯ ಬೆಳಾಲು ಗ್ರಾಮದ ರಸ್ತೆಯಲ್ಲಿ ತೆರಳುತ್ತಿದ್ದ ಏಳನೇ ತರಗತಿ ವಿದ್ಯಾರ್ಥಿನಿ ಮೇಲೆಯೂ ಅತ್ಯಾಚಾರಕ್ಕೆ ಯತ್ನಿಸಲಾಗಿದೆ. ವಿದ್ಯಾರ್ಥಿನಿ ನಡೆದುಕೊಂಡು ಹೋಗುತ್ತಿರುವಾಗ ಬೈಕ್‌ನಲ್ಲಿ ಬಂದ ಕಾಮುಕನೊಬ್ಬ ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.
ಈ ಎಲ್ಲ ಪ್ರಕರಣಗಳಲ್ಲೂ ಹಿಂದು ಹೆಣ್ಣುಮಕ್ಕಳನ್ನು ಟಾರ್ಗೆಟ್ ಮಾಡಲಾಗಿದ್ದು, ಜಿಲ್ಲೆಯ ಶಾಂತಿ ಕದಡುವ ಪ್ರಯತ್ನ ನಡೆಯುತ್ತಿದೆ ಎಂಬ ಶಂಕೆ ಇದೆ. ಮನೆಯಿಂದ ಹೆಣ್ಣು ಮಕ್ಕಳನ್ನು ಹೊರಗೆ ಕಳುಹಿಸಲು ಪೋಷಕರು ಭಯಬೀಳುತ್ತಿದ್ದು, ಪೊಲೀಸರು ಈ ಬಗ್ಗೆ ಹೆಚ್ಚು ನಿಗಾವಹಿಸಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

Don't Miss