ಹೊಸದಿಗಂತ ಡಿಜಿಟಲ್ ಡೆಸ್ಕ್:
ಗ್ರಾಮೀಣ ಜನರಲ್ಲಿ ಹಾಗೂ ವಿದ್ಯಾರ್ಥಿ ಸಮೂಹದಲ್ಲಿ ಪುಸ್ತಕಗಳನ್ನು ಓದುವ ಹವ್ಯಾಸ ಮೂಡಿಸಬೇಕು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೊಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕ ಪ್ರದೇಶದ ಅಭಿವೃದ್ಧಿಯ ದೃಷ್ಟಿಯಿಂದ ಫೆಲೊಗಳು ಸೇತುವೆಗಳಂತೆ ಕಾರ್ಯನಿರ್ವಹಿಸಬೇಕು.
ಈ ಪ್ರದೇಶದ ಅಭಿವೃದ್ಧಿಗಾಗಿ ಸರ್ಕಾರ ರಚಿಸಿರುವ ಗೋವಿಂದರಾವ್ ಸಮಿತಿಗೆ ಪೂರಕ ಅಂಕಿ ಅಂಶಗಳ ದತ್ತಾಂಶಗಳನ್ನು ನೀಡುವ ದೃಷ್ಟಿಯಲ್ಲಿಯೂ ಫೆಲೊಗಳು ಕಾರ್ಯಪ್ರವೃತ್ತರಾಗಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.