ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಶ್ರೇಯಸ್ ಅಯ್ಯರ್ ನಾಯಕತ್ವದ ಭಾರತ ಎ ತಂಡ, ಆಸ್ಟ್ರೇಲಿಯಾ ಎ ವಿರುದ್ಧ ಅನಧಿಕೃತ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಎ ತಂಡ ಮೊದಲು ಬ್ಯಾಟಿಂಗ್ ಮಾಡಿ ಮೊದಲ ಇನ್ನಿಂಗ್ಸ್‌ನ 532 ರನ್ ಕಲೆಹಾಕಿದೆ.
ಭಾರತ ಎ ತಂಡದ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ವೇಳೆ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ 114 ಎಸೆತಗಳಲ್ಲಿ ಒಂಬತ್ತು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ ಶತಕ ಬಾರಿಸಿದ್ದಾರೆ.
ಶತಕದ ಜೊತೆಗೆ ಅವರು ದೇವದತ್ ಪಡಿಕ್ಕಲ್ ಅವರೊಂದಿಗೆ ಐದನೇ ವಿಕೆಟ್‌ಗೆ ಉತ್ತಮ ಜೊತೆಯಾಟವನ್ನು ಕಟ್ಟಿದರು. ಇವರಿಬ್ಬರ ಜೊತೆಯಾಟದಿಂದಾಗಿ 3ನೇ ದಿನದಾಟದಂತ್ಯಕ್ಕೆ ಭಾರತ ತಂಡ 4 ವಿಕೆಟ್ ಕಳೆದುಕೊಂಡು 403 ರನ್ ಗಳಿಸಿದೆ.