ಹೊಸದಿಗಂತ ಡಿಜಿಟಲ್ ಡೆಸ್ಕ್:
ಪರ್ತ್ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 295 ರನ್ಗಳ ಅಮೋಘ ಗೆಲುವು ದಾಖಲಿಸಿದೆ.
ಇದು ಆಸ್ಟ್ರೇಲಿಯಾದಲ್ಲಿ ಅತಿದೊಡ್ಡ ಟೆಸ್ಟ್ ಗೆಲುವು ಎಂಬುದು ವಿಶೇಷ. ಇದಕ್ಕೂ ಮುನ್ನ 1977 ರಲ್ಲಿ ಮೆಲ್ಬೋರ್ನ್ ಟೆಸ್ಟ್ನಲ್ಲಿ ಟೀಮ್ ಇಂಡಿಯಾ 222 ರನ್ಗಳ ಗೆಲುವು ದಾಖಲಿಸಿದ್ದು ಇದುವರೆಗಿನ ಶ್ರೇಷ್ಠ ಜಯವಾಗಿತ್ತು. ಇದೀಗ ಬರೋಬ್ಬರಿ 47 ವರ್ಷಗಳ ಬಳಿಕ ಹೊಸ ಇತಿಹಾಸ ರಚಿಸುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.
ಒಪ್ಟಸ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಜಸ್ಪ್ರೀತ್ ಬುಮ್ರಾ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು ಮೊದಲ ಇನಿಂಗ್ಸ್ನಲ್ಲಿ 150 ರನ್ಗಳಿಸಿ ಆಲೌಟ್ ಆಯಿತು.
ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಆಸ್ಟ್ರೇಲಿಯಾ ತಂಡವು ಭಾರತೀಯ ವೇಗಿಗಳ ಮಾರಕ ದಾಳಿಗೆ ತತ್ತರಿಸಿ ಕೇವಲ 104 ರನ್ಗಳಿಗೆ ಆಲೌಟ್ ಆಯಿತು. ಟೀಮ್ ಇಂಡಿಯಾ ಪರ ಬುಮ್ರಾ 30 ರನ್ ನೀಡಿ 5 ವಿಕೆಟ್ ಕಬಳಿಸಿ ಮಿಂಚಿದರು.