Wednesday, November 5, 2025

IND vs AUS: ಭಾರತ vs ಆಸ್ಟ್ರೇಲಿಯಾ ಪಂದ್ಯ ಎಷ್ಟು ಗಂಟೆಗೆ?

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭಾರತ vs ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯು ಇಂದಿನಿಂದ ಶುರುವಾಗಲಿದೆ. ಐದು ಪಂದ್ಯಗಳ ಈ ಸರಣಿಯ ಮೊದಲ ಮ್ಯಾಚ್​ ಕ್ಯಾನ್​ಬೆರಾದಲ್ಲಿ ನಡೆಯಲಿದೆ. ಈ ಪಂದ್ಯವು ಎಷ್ಟು ಗಂಟೆಗೆ ಶುರುವಾಗಲಿದೆ? ಯಾವ ಚಾನೆಲ್​ನಲ್ಲಿ ಪಂದ್ಯವನ್ನು ಲೈವ್ ವೀಕ್ಷಿಸಬಹುದು?

ಭಾರತ vs ಆಸ್ಟ್ರೇಲಿಯಾ ನಡುವಣ ಸರಣಿ ಎಷ್ಟು ಗಂಟೆಗೆ ಶುರು?

ಇಂಡೊ-ಆಸೀಸ್ ನಡುವಣ 5 ಪಂದ್ಯಗಳ ಟಿ20 ಸರಣಿಯು ಭಾರತೀಯ ಕಾಲಮಾನ ಮಧ್ಯಾಹ್ನ 1.45 ಕ್ಕೆ ಶುರುವಾಗಲಿದೆ. ಇದಕ್ಕೂ ಮುನ್ನ 1.15 ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಟಿ20 ಸರಣಿಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್​ವರ್ಕ್ ಚಾನೆಲ್​ಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಜಿಯೋ ಹಾಟ್​ಸ್ಟಾರ್ ಆ್ಯಪ್​ ಹಾಗೂ ವೆಬ್​ಸೈಟ್​ನಲ್ಲೂ ಈ ಪಂದ್ಯಗಳ ಲೈವ್ ಸ್ಟ್ರೀಮಿಂಗ್ ಇರಲಿದೆ.

error: Content is protected !!