ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯ ಈಡನ್ ಗಾರ್ಡನ್‌ನಲ್ಲಿ ನಡೆಯುತ್ತಿದೆ. ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ.
ಮೊಹಮ್ಮದ್ ಶಮಿ ತಂಡಕ್ಕೆ ಮರಳಿರುವುದರಿಂದ ತಂಡದ ಬೌಲಿಂಗ್ ದಾಳಿ ಮೊದಲಿಗಿಂತ ಬಲಿಷ್ಠವಾಗಿದೆ. ಬ್ಯಾಟಿಂಗ್‌ನಲ್ಲಿ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಅತ್ಯುತ್ತಮ ಫಾರ್ಮ್‌ನಲ್ಲಿದ್ದಾರೆ. ಮತ್ತೊಂದೆಡೆ,
ಇಂಗ್ಲೆಂಡ್ ತಂಡ ಕೂಡ ತುಂಬಾ ಬಲಿಷ್ಠವಾಗಿದ್ದು, ಫಿಲ್ ಸಾಲ್ಟ್, ಜೋಸ್ ಬಟ್ಲರ್, ಲಿಯಾಮ್ ಲಿವಿಂಗ್‌ಸ್ಟೋನ್ ಯಾವುದೇ ಬೌಲಿಂಗ್ ದಾಳಿಯನ್ನು ಛಿದ್ರಗೊಳಿಸುವ ಸಾಮರ್ಥ್ಯ ಹೊಂದಿದ್ದಾರೆ.