ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಇಂಗ್ಲೆಂಡ್ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯ ಆರಂಭವಾಗಿದೆ. ರಾಂಚಿಯ ಜೆಎಸ್‌ಸಿಎ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಇಂಗ್ಲೆಂಡ್ ನಾಯಕ ಬೆನ್ ಸ್ಟೋಕ್ಸ್ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಈ ಪಂದ್ಯ ಎರಡೂ ತಂಡಗಳಿಗೆ ಮಹತ್ವದ್ದಾಗಿದೆ. ಸದ್ಯ ಐದು ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 2-1 ಮುನ್ನಡೆ ಸಾಧಿಸಿದೆ. ಹೀಗಾಗಿ ಈ ಟೆಸ್ಟ್ ಪಂದ್ಯ ಗೆದ್ದರೆ ಭಾರತ ಸರಣಿ ಕೈವಶವಾಗಲಿದೆ. ಇಂಗ್ಲೆಂಡಿಗೆ ಇದು ಜೀವನ್ಮರಣದ ಆಟವಾಗಿದೆ.