IND vs ENG | ಟಾಸ್ ಗೆದ್ದ ಇಂಗ್ಲೆಂಡ್ ತಂಡ ಮೊದಲು ಬ್ಯಾಟಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ಈಗಾಗಲೇ ಶುರುವಾಗಿದ್ದು, ಟಾಸ್ ಗೆದ್ದ ಇಂಗ್ಲೆಂಡ್ ತಂಡ ದ ನಾಯಕ ಬೆನ್ ಸ್ಟೋಕ್ಸ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಈಗಾಗಲೇ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-1 ಮುನ್ನಡೆ ಸಾಧಿಸಿದೆ.

ಆಂಗ್ಲ ಹಾಗೂ ಭಾರತ ತಂಡಗಳಲ್ಲಿ ದೊಡ್ಡ ಬದಲಾವಣೆಗಳಾಗಿವೆ. ಓಲಿ ರಾಬಿನ್‌ಸನ್ ಬದಲಿಗೆ ಮಾರ್ಕ್‌ ವುಡ್ ಇಂಗ್ಲೆಂಡ್ ತಂಡದಲ್ಲಿ ಸ್ಥಾನ ಪಡೆಯಲಿದ್ದಾರೆ. ಮತ್ತೊಂದೆಡೆ, ಕರ್ನಾಟಕದ ದೇವದತ್ ಪಡಿಕ್ಕಲ್ ಅವರು ಟೀಮ್ ಇಂಡಿಯಾಗೆ ಪಾದಾರ್ಪಣೆ ಮಾಡಿದ್ದಾರೆ, ಆಕಾಶ್ ದೀಪ್ ಬದಲಿಗೆ ಜಸ್ಪ್ರೀತ್ ಬುಮ್ರಾ ತಂಡವನ್ನು ಸೇರಿಕೊಂಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!