IND vs ENG: 14 ವರ್ಷಗಳ ನಂತರ ಹೈದರಾಬಾದ್‌ನಲ್ಲಿ ಸೋತ ಭಾರತ..!

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ ಕಳಪೆ ಆರಂಭ ಕಂಡಿದೆ. ಹೈದರಾಬಾದ್‌ನಲ್ಲಿ ನಡೆದ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾ 28 ರನ್‌ಗಳಿಂದ ಸೋಲು ಅನುಭವಿಸಿದೆ. 14 ವರ್ಷಗಳ ನಂತರ ಹೈದರಾಬಾದ್‌ನಲ್ಲಿ ಟೀಂ ಇಂಡಿಯಾ ಸೋಲು ಅನುಭವಿಸಿದೆ.

ವಾಸ್ತವವಾಗಿ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಕಳೆದ ವರ್ಷ ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿಯನ್ನು ಆಡಿತ್ತು. ಆ ಸರಣಿಯ ಕೊನೆಯ 2 ಪಂದ್ಯಗಳಲ್ಲಿ ಟೀಂ ಇಂಡಿಯಾ ಒಂದು ಪಂದ್ಯದಲ್ಲಿ ಸೋತಿದ್ದು, ಒಂದು ಪಂದ್ಯವನ್ನು ಡ್ರಾದಲ್ಲಿ ಅಂತ್ಯಗೊಳಿಸಿತ್ತು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!