Friday, March 1, 2024

IND vs ENG: ಮೂರು ಟೆಸ್ಟ್ ಪಂದ್ಯಗಳಿಂದ ಕಿಂಗ್ ಕೊಹ್ಲಿ ಔಟ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಇಂಗ್ಲೆಂಡ್ ಹಾಗೂ ಇಂಡಿಯಾ ನಡುವಿನ ಕೊನೆಯ ಟೆಸ್ಟ್ ಸರಣಿ ಪಂದ್ಯ ಇನ್ನೇನು ಶುರುವಾಗಲಿದೆ. ಆದರೆ ಈಗ ಈ ಕುರಿತು ಒಂದು ಬಿಗ್ ಅಪ್ಡೇಟ್ ಲಭ್ಯವಾಗಿದೆ. ಅದೇನು ಅಂದ್ರೆ, ಈ ಸಲ ನಡೆಯುವ ಇಂಗ್ಲೆಂಡ್ ವಿರುದ್ದದ ಕೊನೆಯ ಮೂರು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ ಹಿಂದೆ ಸರಿಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Virat Kohli Sad Wallpapers - Wallpaper Cave

ಸ್ವತಃ ವಿರಾಟ್ ಕೊಹ್ಲಿ ಅವರು ಬಿಸಿಸಿಐ ಹಾಗೂ ಆಯ್ಕೆದಾರರಿಗೆ ಆನ್ಲೈನ್ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ ಎಂದು ಬಿಸಿಸಿಐ ತಿಳಿಸಿದೆ. ತಮ್ಮ ವೈಯಕ್ತಿಕ ಕಾರಣದಿಂದಾಗಿ ವಿರಾಟ್ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಇನ್ನು ಈ ಸುದ್ದಿ ಅವರ ಅಭಿಮಾನಿಗಳ ಬಳಗಕ್ಕೆ ನಿರಾಸೆ ಉಂಟುಮಾಡಿದೆ. ಕೊಹ್ಲಿ ಇಲ್ಲದ ಮ್ಯಾಚ್ ಅನ್ನು ನೋಡಲು ಅಭಿಮಾನಿಗಳಿಗೆ ಕೊಂಚ ಬೇಸರ ತಂದಿದೆ.

Virat Kohli 'not a fan' of four-day Test proposals | Cricket News | Sky  Sports

ಇನ್ನು ಕೊಹ್ಲಿ ಹೊರತಾಗಿಯೂ ಮಧ್ಯಮ ಕ್ರಮಾಂಕದ ಬ್ಯಾಟರ್ ಶ್ರೇಯಸ್ ಅಯ್ಯರ್ ಕೂಡ ಇಂಗ್ಲೆಂಡ್ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಂದ ದೂರ ಉಳಿದಿದ್ದಾರೆ. ಗಾಯದ ಕಾರಣದಿಂದ ಶ್ರೇಯಸ್ ಅಯ್ಯರ್ ಹೊರಗುಳಿದಿದ್ದಾರೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!