ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತ ಮತ್ತು ಇಂಗ್ಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯಕ್ಕೆ ವೇದಿಕೆ ಸಜ್ಜಾಗಿದೆ. ಮೊದಲ ಪಂದ್ಯ ಮಳೆಯಿಂದ ಫಲಿತಾಂಶವಿಲ್ಲದೆ ಅಂತ್ಯಗೊಂಡಿದ್ದರಿಂದ, ಇದೀಗ ಎರಡೂ ತಂಡಗಳು ಸರಣಿಯಲ್ಲಿ ಮುನ್ನಡೆ ಸಾಧಿಸುವ ಉದ್ದೇಶದೊಂದಿಗೆ ಕಣಕ್ಕಿಳಿಯಲಿವೆ.
ಈ ಬಾರಿ ಭಾರತೀಯ ಅಭಿಮಾನಿಗಳಿಗೆ ಮತ್ತೊಂದು ಸಂತಸದ ಸುದ್ದಿಯೂ ಇದೆ. ಪಂದ್ಯ ರಾತ್ರಿ ತಡವಾಗಿ ಅಲ್ಲ, ಸಂಜೆ ವೇಳೆಯಲ್ಲೇ ಆರಂಭವಾಗಲಿದೆ.
ಸಂಜೆ 7ಕ್ಕೆ ಪಂದ್ಯ ಆರಂಭ
ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ಪಂದ್ಯ ನಡೆಯಲಿದ್ದು, ಭಾರತೀಯ ಕಾಲಮಾನ ಸಂಜೆ 6.30ಕ್ಕೆ ಟಾಸ್ ನಡೆಯಲಿದೆ. ಸಂಜೆ 7 ಗಂಟೆಗೆ ಪಂದ್ಯ ಆರಂಭವಾಗಲಿದ್ದು, ರಾತ್ರಿ 11 ಗಂಟೆಯೊಳಗೆ ಫಲಿತಾಂಶ ಹೊರಬೀಳುವ ಸಾಧ್ಯತೆ ಇದೆ. ಇದರಿಂದ ಅಭಿಮಾನಿಗಳು ರಾತ್ರಿ ತಡವರೆಗೆ ಕಾದು ನೋಡಬೇಕಾದ ಅಗತ್ಯ ಇರುವುದಿಲ್ಲ.
ಇದನ್ನೂ ಓದಿ:
ಮೊದಲ ಪಂದ್ಯ ಮಳೆಗೆ ಬಲಿ
ಚೆಸ್ಟರ್-ಲೆ-ಸ್ಟ್ರೀಟ್‌ನಲ್ಲಿ ನಡೆದ ಮೊದಲ ಟಿ20ಯಲ್ಲಿ ಭಾರತ ಮೊದಲು ಬ್ಯಾಟಿಂಗ್ ಮಾಡಿ 189 ರನ್ ಗಳಿಸಿತ್ತು. ಆದರೆ ಇಂಗ್ಲೆಂಡ್ ಇನ್ನಿಂಗ್ಸ್ ಆರಂಭಕ್ಕೂ ಮುನ್ನ ಭಾರೀ ಮಳೆ ಸುರಿದ ಕಾರಣ ಪಂದ್ಯವನ್ನು ರದ್ದುಗೊಳಿಸಲಾಯಿತು. ಹೀಗಾಗಿ ಎರಡೂ ತಂಡಗಳು ತಲಾ ಒಂದೊಂದು ಅಂಕದೊಂದಿಗೆ ಮುಂದಿನ ಪಂದ್ಯಕ್ಕೆ ಸಜ್ಜಾಗಿವೆ.
ಓಲ್ಡ್ ಟ್ರಾಫರ್ಡ್‌ನಲ್ಲಿ ಭಾರತದ ದಾಖಲೆ
ಟೀಂ ಇಂಡಿಯಾ ಎಂಟು ವರ್ಷಗಳ ಬಳಿಕ ಓಲ್ಡ್ ಟ್ರಾಫರ್ಡ್‌ನಲ್ಲಿ ಟಿ20 ಪಂದ್ಯವಾಡುತ್ತಿದೆ. ಈ ಮೈದಾನದಲ್ಲಿ ಭಾರತ ಇದುವರೆಗೆ ಎರಡು ಟಿ20 ಪಂದ್ಯಗಳನ್ನು ಆಡಿದ್ದು, ಒಂದರಲ್ಲಿ ಗೆಲುವು ಮತ್ತು ಮತ್ತೊಂದರಲ್ಲಿ ಸೋಲು ಕಂಡಿದೆ.



