ಹೊಸದಿಗಂತ ಡಿಜಿಟಲ್ ಡೆಸ್ಕ್:
ಟೀಂ ಇಂಡಿಯಾ ಸ್ಟಾರ್ ಆಟಗಾರ ಮೊಹಮ್ಮದ್ ಸಿರಾಜ್ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್‌ನಲ್ಲಿ ನಾಲ್ಕು ವಿಕೆಟ್‌ಗಳನ್ನು ಪಡೆಯುವ ಮೂಲಕ ವಿಶೇಷ ಮೈಲಿಗಲ್ಲು ಸಾಧಿಸಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 150 ವಿಕೆಟ್‌ಗಳನ್ನು ಪಡೆದಿದ್ದಾರೆ.
ರಾಜ್‌ಕೋಟ್‌ನ ನಿರಂಜನ್ ಶಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೂರನೇ ದಿನದಾಟದಲ್ಲಿ ಸಿರಾಜ್ ಬಿರುಸಿನ ಬೌಲಿಂಗ್ ದಾಳಿ ನಡೆಸಿ 21.1 ಓವರ್ ಬೌಲಿಂಗ್ ಮಾಡಿ 84 ರನ್ ನೀಡಿ ನಾಲ್ಕು ಪ್ರಮುಖ ವಿಕೆಟ್ ಪಡೆದುಕೊಂಡಿದ್ದಾರೆ. ಅವರ ಬೌಲಿಂಗ್ ದಾಳಿಯ ಪರಿಣಾಮವಾಗಿ ಇಂಗ್ಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 319 ರನ್ ಗಳಿಸಿತು. ಭಾರತ ಮೊದಲ ಇನಿಂಗ್ಸ್‌ನಲ್ಲಿ 126 ರನ್‌ಗಳ ಮುನ್ನಡೆ ಸಾಧಿಸಿತ್ತು.
ಈ ನಾಲ್ಕು ವಿಕೆಟ್‌ಗಳೊಂದಿಗೆ ಮೊಹಮ್ಮದ್ ಸಿರಾಜ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 150 ವಿಕೆಟ್ ಪಡೆದ 33ನೇ ಭಾರತೀಯ ಬೌಲರ್ ಎನಿಸಿಕೊಂಡಿದ್ದಾರೆ.