ಹೊಸದಿಗಂತ ಡಿಜಿಟಲ್ ಡೆಸ್ಕ್:
2026ರ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ಅಂತಿಮ ಹಂತ ತಲುಪಿದ್ದು, ಫೈನಲ್ ಪಂದ್ಯದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ.
ಮಾರ್ಚ್ 8ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಮಹತ್ವದ ಪಂದ್ಯ ಕ್ರಿಕೆಟ್ ಅಭಿಮಾನಿಗಳಲ್ಲಿ ಅಪಾರ ಕುತೂಹಲ ಮೂಡಿಸಿದ್ದು, ಫೈನಲ್‌ಗೂ ಮುನ್ನ ಭಾರತ ತಂಡದ ಆಡುವ ಹನ್ನೊಂದರ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ.
ಟೂರ್ನಿಯುದ್ದಕ್ಕೂ ನಿರೀಕ್ಷಿತ ಪ್ರದರ್ಶನ ನೀಡಲು ವಿಫಲರಾದ ಅಭಿಷೇಕ್ ಶರ್ಮಾ ಅವರನ್ನು ತಂಡದಿಂದ ಹೊರಗಿಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಏಳು ಪಂದ್ಯಗಳಲ್ಲಿ ಅವರು ಕೇವಲ 89 ರನ್ ಗಳಿಸಿದ್ದು ತಂಡ ನಿರ್ವಹಣೆಯ ಚಿಂತೆಗೆ ಕಾರಣವಾಗಿದೆ. ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲೂ ಅವರು ಕೇವಲ 9 ರನ್ ಗಳಿಸಿ ನಿರಾಶೆ ಮೂಡಿಸಿದ್ದರು.
ಇದನ್ನೂ ಓದಿ:
ಅಭಿಷೇಕ್ ಸ್ಥಾನಕ್ಕೆ ಇಶಾನ್ ಕಿಶನ್ ಆರಂಭಿಕರಾಗಿ ಮರಳುವ ಸಾಧ್ಯತೆ ಹೆಚ್ಚಾಗಿದೆ. ಟೂರ್ನಿಯಲ್ಲಿ ಈಗಾಗಲೇ ಎರಡು ಅರ್ಧಶತಕಗಳೊಂದಿಗೆ ಉತ್ತಮ ಪ್ರದರ್ಶನ ನೀಡಿರುವ ಅವರು ಆರಂಭಿಕ ಸ್ಥಾನಕ್ಕೆ ಸೂಕ್ತ ಆಯ್ಕೆಯೆಂದು ಪರಿಗಣಿಸಲಾಗಿದೆ.
ಇದೇ ವೇಳೆ ತಂಡದ ಸಂಯೋಜನೆ ಪಿಚ್ ಪರಿಸ್ಥಿತಿಯ ಮೇಲೆ ಅವಲಂಬಿತವಾಗಿರಬಹುದು. ಸ್ಪಿನ್ನರ್ ಕುಲದೀಪ್ ಯಾದವ್ ಅಂತಿಮ ಹನ್ನೊಂದರಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚು ಎಂದು ಹೇಳಲಾಗುತ್ತಿದೆ. 54 ಟಿ20 ಪಂದ್ಯಗಳಲ್ಲಿ 95 ವಿಕೆಟ್ ಪಡೆದಿರುವ ಅವರ ಅನುಭವ ಭಾರತ ಬೌಲಿಂಗ್ ದಾಳಿಗೆ ಬಲ ನೀಡಬಹುದು ಎನ್ನಲಾಗಿದೆ.



