ಜಸ್​ಪ್ರೀತ್ ಬುಮ್ರಾ ಸ್ಥಾನಕ್ಕೆ ಸೇರ್ಪಡೆಯಾದ ವೇಗಿ ಮೊಹಮದ್‌ ಸಿರಾಜ್‌ 

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಟಿ20 ವಿಶ್ವಕಪ್ ಮತ್ತು ಪ್ರಸ್ತುತ ಸಾಗುತ್ತಿರುವ ದಕ್ಷಿಣ ಆಫ್ರಿಕಾ ಸರಣಿಯಿಂದ ಜಸ್ಪ್ರೀತ್ ಬುಮ್ರಾ ಹೊರಬಿದ್ದಿದ್ದು, ಅವರ ಬದಲಿಗೆ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಬಿಸಿಸಿಐ ಹೆಸರಿಸಿದೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಬಿಸಿಸಿಐ, 28 ವರ್ಷದ ಬಲಗೈ ವೇಗಿ ಮೊಹಮದ್‌ ಸಿರಾಜ್‌ ರನ್ನು ಗುವಾಹಟಿ ಮತ್ತು ಇಂದೋರ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ ಕೊನೆಯ ಎರಡು ಟಿ20 ಪಂದ್ಯಗಳಿಗೆ ತಂಡಕ್ಕೆ ಏರ್ಪಡೆಗೊಳಿಸಲಾಗಿದೆ ಎಂದು ಹೇಳಿದೆ.
ಬೆನ್ನುನೋವಿಗೆ ಒಳಗಾಗಿರುವ ಬುಮ್ರಾ ಪ್ರಸ್ತುತ ಬಿಸಿಸಿಐ ವೈದ್ಯಕೀಯ ತಂಡದ ಮೇಲ್ವಿಚಾರಣೆಯಲ್ಲಿದ್ದಾರೆ. ಅವರು ಪಂದ್ಯಾವಳಿಯಿಂದ ಹೊರಗುಳಿಯುವುದನ್ನು ಖಚಿತವಾಗಿದೆ. ಬೆನ್ನುನೋವಿನ ಕಾರಣ ಬುಮ್ರಾ ಆರು ತಿಂಗಳ ಕಾಲ ಮೈದಾನದಿಂದ ಹೊರಗುಳಿಯಲಿದ್ದಾರೆ ಎಂದು ಬಿಸಿಸಿಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಬುಮ್ರಾ ಖಚಿತವಾಗಿ ಟಿ20 ವಿಶ್ವಕಪ್ ಆಡುವುದಿಲ್ಲ. ಅವರಿಗೆ ಬೆನ್ನುಮೂಳೆಯ ಮುರಿತದ ಗಂಭೀರ ಸ್ಥಿತಿ ಇದೆ. ಇದು ಒತ್ತಡದ ಮುರಿತವಾಗಿದ್ದು ಮತ್ತು ಅವರು ಆರು ತಿಂಗಳ ಅವಧಿಗೆ ಹೊರಗುಳಿಯಬಹುದು ಎಂದು ಅಧಿಕಾರಿ ತಿಳಿಸಿದ್ದಾರೆ.
ಸಿರಾಜ್‌ ಕಳೆದ ಫೆಬ್ರವರಿಯಲ್ಲಿ ಶ್ರೀಲಂಕಾ ವಿರುದ್ಧ ಧರ್ಮಶಾಲಾದಲ್ಲಿ ಭಾರತಕ್ಕಾಗಿ ಕೊನೆಯ ಬಾರಿಗೆ ಆಡಿದ್ದರು. ಆ ಬಳಿಕ ಅವರು ತಂಡದಲ್ಲಿ ಕಾಣಿಸಿಕೊಂಡಿರಲಿಲ್ಲ. ನಂತರದ ತಿಂಗಳುಗಳಲ್ಲಿ, ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್‌ನಲ್ಲಿನ ಏಕದಿನ ಪಂದ್ಯಗಳಿಗೆ ಸಿರಾಜ್ ರನ್ನು ಆಯ್ಕೆ ಮಾಡಲಾಗಿತ್ತು. ಐಪಿಎಲ್ 2022 ರಲ್ಲಿ ಅವರ ಸಾಧಾರಣ ಪ್ರದರ್ಶನವು ಟಿ 20 ತಂಡದಿಂದ ಹೊರಬೀಳಲು ಕಾರಣವಾಗಿತ್ತು. ಅವರು 15 ಪಂದ್ಯಗಳಲ್ಲಿ ಕೇವಲ ಒಂಬತ್ತು ವಿಕೆಟ್‌ಗಳನ್ನು ಗಳಿಸಿದ್ದರು.
ದಕ್ಷಿಣ ಆಫ್ರಿಕಾ T20ಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್-ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್-ಕೀಪರ್), ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ದೀಪಕ್ ಚಹಾರ್, ಉಮೇಶ್ ಯಾದವ್, ಶ್ರೇಯಸ್ ಅಯ್ಯರ್, ಶಹಬಾಜ್ ಅಹ್ಮದ್, ಮೊಹಮ್ಮದ್ ಸಿರಾಜ್

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!