ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ಮಾ.12 ಆರಂಭವಾಗುತ್ತಿರುವ ಹೊನಲು ಬೆಳಕಿನ ಟೆಸ್ಟ್ ಆರಂಭಕ್ಕೂ ಮುನ್ನ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದೆ. ಪಂದ್ಯದಲ್ಲಿ ಪೂರ್ಣಪ್ರಮಾಣದ ಪ್ರೇಕ್ಷಕರಿಗೆ ಅವಕಾಶ ಕಲ್ಪಿಸಲಾಗಿದೆ.
ಈ ಮೊದಲು ಕೊರೋನಾ ಮುನ್ನೆಚ್ಚರಿಕೆ ಆಸನ ಸಾಮರ್ಥ್ಯವನ್ನು ಶೇ. 50ಕ್ಕೆ ಸೀಮಿತಗೊಳಿಸಲಾಗಿತ್ತು. ಇದೀಗ ಕೆಎಸ್ಸಿಎ ನಿರ್ಧಾರ ಬದಲಿಸಿ ಪೂರ್ಣಪ್ರಮಾಣದ ಪ್ರೇಕ್ಷರಿಗೆ ಅವಕಾಶ ಕಲ್ಪಿಸಿದ್ದರಿಂದ ಕ್ರೀಡಾಭಿಮಾನಿಗಳು ಸಂತಸಗೊಂಡಿದ್ದಾರೆ.
2 ವರ್ಷಗಳ ಬಳಿಕ ಚಿನ್ನಸ್ವಾಮಿ ಕ್ರಿಡಾಂಗಣದಲ್ಲಿ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು, ಪಂದ್ಯವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರರಾಗಿದ್ದಾರೆ. ಮೊದಲ ಪಂದ್ಯದಲ್ಲಿ ಭರ್ಜರಿ ಜಯ ದಾಖಲಿಸಿರುವ ರೋಹಿತ್ ಶರ್ಮಾ ಬಳಗ ಪಿಂಕ್ ಬಾಲ್ ಟೆಸ್ಟ್ ನಲ್ಲಿಯೂ ಅದೇ ಪಾರಮ್ಯ ಮುಂದುವರೆಸಿ ಎರಡು ಪಂದ್ಯಗಳ ಸರಣಿಯನ್ನು ವಶಪಡಿಸಿಕೊಳ್ಳುವ ಯೋಜನೆಯಲ್ಲಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ