ಟೀಂ ಇಂಡಿಯಾ ವಿರುದ್ಧದ ಏಕದಿನ ಸರಣಿಗೆ ಬಲಿಷ್ಠ ತಂಡ ಪ್ರಕಟಿಸಿದ ವೆಸ್ಟ್‌ ಇಂಡೀಸ್‌

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಭಾರತದ ವಿರುದ್ಧ ತವರಿನಲ್ಲಿ ನಡೆಯಲಿರುವ ಮೂರು ಪಂದ್ಯಗಳ ಏಕದಿನ ಸರಣಿಗೆ ಆತಿಥೇಯ ವೆಸ್ಟ್‌ ಇಂಡೀಸ್‌ ಬಲಿಷ್ಠ ತಂಡವನ್ನು ಪ್ರಕಟಿಸಿದೆ.
ವೆಸ್ಟ್ ಇಂಡೀಸ್‌ ಕ್ರಿಕೆಟ್ ಆಯ್ಕೆ ಸಮಿತಿ (CWI) ಸರಣಿಯಲ್ಲಿ ಭಾರತವನ್ನು ಎದುರಿಸಲು 13 ಆಟಗಾರರಿರುವ ತಂಡವನ್ನು ಹೆಸರಿಸಿದೆ. ವಿಕೆಟ್ ಕೀಪರ್‌ ಬ್ಯಾಟ್ಸ್ಮನ್ ನಿಕೋಲಾಸ್‌ ಪೂರನ್‌ ತಂಡವನ್ನು ಮುನ್ನಡೆಸಲಿದ್ದಾರೆ. ಶಾಯ್ ಹೋಪ್ ಉಪನಾಯಕನ ಹೊಣೆ ಹೊತ್ತಿದ್ದಾರೆ. ಬಾಂಗ್ಲಾದೇಶ ವಿರುದ್ಧ ವಿಶ್ರಾಂತಿ ಪಡೆದಿದ್ದ ಅನುಭವಿ ಆಲ್‌ರೌಂಡರ್ ಜೇಸನ್ ಹೋಲ್ಡರ್ ತಂಡಕ್ಕೆ ಮರಳಿದ್ದಾರೆ.
ಮೂರು ಪಂದ್ಯಗಳು ಜುಲೈ 22, 24 ಮತ್ತು 27 ರಂದು ಜಮೈಕಾದ ಕ್ವೀನ್ಸ್ ಪಾರ್ಕ್ ಓವಲ್‌ನಲ್ಲಿ ನಡೆಯಲಿವೆ. ಎಲ್ಲಾ ಪಂದ್ಯಗಳು ಬೆಳಿಗ್ಗೆ 9:30 ಕ್ಕೆ (ಜಮೈಕಾದ ಸಮಯ/ ಭಾರತದ ಸಮಯ ರಾತ್ರಿ 8:30 ಗಂಟೆಗೆ) ಪ್ರಾರಂಭವಾಗುತ್ತವೆ.

ವೆಸ್ಟ್‌ ಇಂಡೀಸ್ ತಂಡ:
ನಿಕೋಲಸ್ ಪೂರನ್ (ನಾಯಕ), ಶಾಯ್ ಹೋಪ್ (ಉಪನಾಯಕ), ಶಮರ್ ಬ್ರೂಕ್ಸ್, ಕೀಸಿ ಕಾರ್ಟಿ, ಜೇಸನ್ ಹೋಲ್ಡರ್, ಅಕೇಲ್ ಹೊಸೈನ್, ಅಲ್ಜಾರಿ ಜೋಸೆಫ್, ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಗುಡಾಕೇಶ್ ಮೋಟಿ, ಕೀಮೋ ಪಾಲ್, ರೋವ್‌ಮನ್ ಪೊವೆಲ್, ಜೇಡನ್ ಸೀಲ್ಸ್.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!