September 22, 2026
Tuesday, September 22, 2026
spot_img

ಅಪ್ರಾಪ್ತ ವಯಸ್ಕ ಬಾಲಕಿ ಜೊತೆ ಅನುಚಿತ ವರ್ತನೆ ಕೇಸ್: ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿ ವಜಾ

ಹೊಸ ದಿಗಂತ ವರದಿ, ಯಾದಗಿರಿ:

ಅಪ್ರಾಪ್ತ ವಯಸ್ಕ ಬಾಲಕಿಯೊಂದಿಗೆ ಅನುಚಿತವಾಗಿ ವರ್ತನೆ ಮಾಡಿದ್ದ ಆರೋಪದ‌ ಮೇಲೆ ಪೋಕ್ಸೋ ಪ್ರಕರಣದಡಿ ಆರೋಪಿಯಾಗಿರುವ ಮಹಲ್ ರೋಜಾದ ಪವಾಡ ಪುರುಷ ಖ್ಯಾತಿಯ ಮಲ್ಲಿಕಾರ್ಜುನ ಮುತ್ಯಾ ಜಾಮೀನು ಅರ್ಜಿಯನ್ನು ಇಲ್ಲಿನ ಜಿಲ್ಲಾ ನ್ಯಾಯಾಲಯ ವಜಾಗೊಳಿಸಿದೆ.

ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದ ಮುತ್ಯಾ ಪರ ವಕೀಲರ ಮತ್ತು ಸರ್ಕಾರಿ ವಕೀಲರ ವಾದ ಆಲಿಸಿದ ನ್ಯಾಯಾಲಯ ಅರ್ಜಿ ತಿರಸ್ಕರಿಸಿ ತೀರ್ಪು ನೀಡಿದೆ.

ಇದು ಮುತ್ಯಾ ಮತ್ತು ಭಕ್ತರಿಗೆ ತೀವ್ರ ಶಾಕ್ ಹೊಡೆದಂತಾಗಿದೆ. ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಮಾಡಿದ್ದ ಕಾರಣ ಮುತ್ಯಾ ವಿರುದ್ಧ ಗೋಗಿ ಪೋಲಿಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಸೋಮವಾರ ಜಾಮೀನು ಸಿಗುವ ವಿಶ್ವಾಸದಲ್ಲಿ‌‌ ಇದ್ದ ಮುತ್ಯಾಗೆ ಭಾರಿ ಆಘಾತವಾಗಿದೆ.

ವಿಚಾರಣೆ ವೇಳೆ ತನಿಖಾಧಿಕಾರಿ ಶರಣಗೌಡ ನ್ಯಾಮಣ್ಣನವರ ಮುತ್ಯಾನ‌‌ ಮೊಬೈಲ್ ಜಫ್ತಿ‌ ಮಾಡಿದ್ದರು. ಪೊಲೀಸರು ಈಗಲಾದರೂ ಮುತ್ಯಾನ ಬಂಧಿಸುವರೋ ಕಾದು ನೋಡಬೇಕಿದೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !