ಬುರ್ಖಾ ಧರಿಸಿ ಅಸಭ್ಯ ನೃತ್ಯ: ನಾಲ್ವರ ವಿದ್ಯಾರ್ಥಿಗಳ ಅಮಾನತು

ಹೊಸದಿಗಂತ ವರದಿ ಮಂಗಳೂರು:

ನಗರದ ಖಾಸಗಿ ಕಾಲೇಜೊಂದರ ವೇದಿಕೆ ಮೇಲೆ ನಾಲ್ವರು ವಿದ್ಯಾರ್ಥಿಗಳು ಬುರ್ಖಾ ಹಾಗೂ ಹಿಜಾಬ್ ಧರಿಸಿ ಅಸಭ್ಯವಾಗಿ ನರ್ತಿಸಿದ್ದಾರೆಂಬ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ಗೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿ ಕಾಲೇಜು ಆ ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿದ ಘಟನೆ ನಡೆದಿದೆ.

ವಾಮಂಜೂರಿನ ಪ್ರತಿಷ್ಠಿತ ಕಾಲೇಜೊಂದರಲ್ಲಿ ಬುಧವಾರ ಅಧಿಕೃತ ಕಾರ್ಯಕ್ರಮದ ಬಳಿಕ ಕಾಲೇಜಿನ ವಿದ್ಯಾರ್ಥಿಗಳು ಅಸಭ್ಯವಾಗಿ ನೃತ್ಯ ಮಾಡಿರುವಂತಹ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಈ ಬಗ್ಗೆ ಕಾಲೇಜಿನ ಆಡಳಿತ ಮಂಡಳಿ ಆಂತರಿಕ ವಿಚಾರಣೆಯ ಬಳಿಕ ಸಂಬಂಧಪಟ್ಟ ವಿದ್ಯಾರ್ಥಿಗಳನ್ನು ಅಮಾನತು ಮಾಡಿರುವುದಾಗಿ ಪ್ರಕಟನೆಯಲ್ಲಿ ತಿಳಿಸಿದೆ.

ಕಾಲೇಜಿನ ಅಧಿಕೃತ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳು ವೇದಿಕೆಯಲ್ಲಿ ಈ ನೃತ್ಯ ಮಾಡಿದ್ದು, ವಿದ್ಯಾರ್ಥಿಗಳು ಅದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿ ವಿಚಾರಣೆ ನಡೆಸಲಾಗುತ್ತಿದೆ. ಕಾಲೇಜು ತನ್ನ ಆವರಣದಲ್ಲಿ ಯಾವುದೇ ರೀತಿಯ ಆಕ್ಷೇಪಾರ್ಹ ಹಾಗೂ ಸಮುದಾಯಗಳ ನಡುವೆ ಸೌಹಾರ್ದತೆಗೆ ಧಕ್ಕೆ ತರುವ ಇಂತಹ ಚಟುವಟಿಕೆಗಳನ್ನು ಬೆಂಬಲಿಸುವುದಿಲ್ಲ. ಈ ಕುರಿತಂತೆ ಸೂಕ್ತ ನಿರ್ದೇಶನಗಳನ್ನು ಕೂಡಾ ಪಾಲಿಸಲಾಗುತ್ತಿದೆ” ಎಂದು ಕಾಲೇಜಿನ ಪ್ರಭಾರ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!