ದೇಶದಲ್ಲಿ ಸ್ವಾತಂತ್ರ್ಯ ಸಂಭ್ರಮ: ನಿಮ್ಮ ಪ್ರೊಫೈಲ್ ಚಿತ್ರ ತ್ರಿವರ್ಣ ಧ್ವಜವಾಗಿ ಬದಲಾಯಿಸಲು ಪ್ರಧಾನಿ ಮೋದಿ ಕರೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ದೇಶದಲ್ಲಿ ಸ್ವಾತಂತ್ರ್ಯ ಸಂಭ್ರಮ. ಈ ಕ್ಷಣವನ್ನು ಹರ್ ಘರ್ ತಿರಂಗಾ ಅಭಿಯಾನದಲ್ಲಿ (Har Ghar Tiranaga movement) ಪಾಲ್ಗೊಳ್ಳುವ ಮೂಲಕ ಮತ್ತಷ್ಟು ಹೆಚ್ಚಿಸುವಂತೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರೆ ನೀಡಿದ್ದಾರೆ.

ಇದರ ಭಾಗವಾಗಿ ಸಾಮಾಜಿಕ ಮಾಧ್ಯಮಗಳ ಖಾತೆಗಳ ಪ್ರೊಫೈಲ್ ಚಿತ್ರಗಳನ್ನು (DP) ತ್ರಿವರ್ಣ ಧ್ವಜವಾಗಿ (Tricolor) ಬದಲಾಯಿಸಲು ಮೋದಿ ಮನವಿ ಮಾಡಿದ್ದಾರೆ. ಈ ಮೂಲಕ ದೇಶ ಹಾಗೂ ಭಾರತೀಯರ ನಡುವೆ ಬಾಂಧವ್ಯವನ್ನು ಗಾಢವಾಗಿಸೋಣ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 13ರಿಂದ 15ರ ನಡುವೆ ಹರ್ ಘರ್ ತಿರಂಗಾ ಅಭಿಯಾನವನ್ನು ಆಚರಿಸಿ. ತಿರಂಗಾ ಜೊತೆಗಿನ ಫೋಟೋ ತೆಗೆದು ಹರ್ ಘರ್ ತಿರಂಗಾ ವೆಬ್‌ಸೈಟ್‌ನಲ್ಲಿ (harghartiranga.com.) ಅಪ್‌ಲೋಡ್ ಮಾಡಿ. ಪ್ರತಿಯೊಬ್ಬ ಭಾರತೀಯನೂ ತ್ರಿವರ್ಣ ಧ್ವಜದೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿದ್ದು, ಮತ್ತಷ್ಟು ರಾಷ್ಟ್ರೀಯ ಪ್ರಗತಿಗೆ ಶ್ರಮಿಸಲು ಇದು ನಮಗೆ ಸ್ಫೂರ್ತಿ ನೀಡುತ್ತದೆ ಎಂದು ಮೋದಿ ತಿಳಿಸಿದ್ದಾರೆ.

ಸರ್ಕಾರದ ಹರ್ ಘರ್ ತಿರಂಗಾ ಅಭಿಯಾನ ಇಂದಿನಿಂದ (ಭಾನುವಾರ) ಪ್ರಾರಂಭವಾಗುತ್ತದೆ. ಹಾಗೂ 77ನೇ ಸ್ವಾತಂತ್ರ್ಯ ದಿನವಾದ ಆಗಸ್ಟ್ 15ರ ವರೆಗೆ ಮುಂದುವರಿಯುತ್ತದೆ. ನಾಗರಿಕರಲ್ಲಿ ದೇಶಭಕ್ತಿಯ ಪ್ರಜ್ಞೆಯನ್ನು ಬಲಪಡಿಸಲು ಹಾಗೂ ಆಜಾದಿ ಕಾ ಅಮೃತ್ ಮಹೋತ್ಸವವನ್ನು ಸ್ಮರಿಸುವ ಸಲುವಾಗಿ ಸಂಸೃತಿ ಸಚಿವಾಲಯ ಈ ಅಭಿಯಾನವನ್ನು ಆಯೋಜಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!