Friday, September 29, 2023

Latest Posts

ಸ್ವಾತಂತ್ರ್ಯ ದಿನಾಚರಣೆ: ದೆಹಲಿಯ ರಾಜ್‌ಘಾಟ್‌, ಐಟಿಒ, ಕೆಂಪು ಕೋಟೆ ಪ್ರದೇಶಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ರಾಷ್ಟ್ರ ರಾಜಧಾನಿ ದೆಹಲಿಯ ರಾಜ್‌ಘಾಟ್‌, ಐಟಿಒ ಮತ್ತು ಕೆಂಪು ಕೋಟೆ ಪ್ರದೇಶಗಳ ಸುತ್ತಮುತ್ತ ಪರಿಸರದಲ್ಲಿ ಸಿಆರ್‌ಪಿಸಿ ಸೆಕ್ಷನ್‌ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ, ರಾಜ್‌ಘಾಟ್‌, ಐಟಿಒ, ಕೆಂಪು ಕೋಟೆ ಸಮೀಪದ ಪ್ರದೇಶಗಳಲ್ಲಿ ಸಿಆರ್‌ಪಿಸಿ (ಅಪರಾಧ ಪ್ರಕ್ರಿಯಾ ಸಂಹಿತೆ) ಸೆಕ್ಷನ್‌ 144ಅನ್ನು ಅನ್ವಯಿಸಲಾಗಿದೆ.

ಈ ಪ್ರದೇಶಗಳಲ್ಲಿ ಯಾವುದೇ ರೀತಿಯ ಸಭೆಗಳನ್ನು ಅನುಮತಿಸಲಾಗುವುದಿಲ್ಲ ಎಂದು ದೆಹಲಿ ಪೊಲೀಸರು X(ಟ್ವಿಟರ್‌)ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಆಗಸ್ಟ್‌ 15 ರಂದು ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!