ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗದಿಂದ ಕೆಎಸ್ ಈಶ್ವರಪ್ಪ ಸ್ವತಂತ್ರ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ. ಇಂದು ಬೆಂಬಲಿಗರ ಜೊತೆ ಮಹತ್ವದ ಸಭೆ ನಡೆಸಿದ ಈಶ್ವರಪ್ಪ, ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಘೋಷಿಸಿದ್ದಾರೆ.
ಬೆಂಬಲಿಗರ ಸಭೆಯಲ್ಲಿ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಆಲಿಸಿದ ಬಳಿಕ ಮಾತನಾಡಿದ ಈಶ್ವರಪ್ಪ, ಬಂಡಾಯಸ್ಪರ್ಧೆ ಘೋಷಣೆ ಮಾಡಿದ್ದಾರೆ. ಇದು ಭಾವುಕರಾಗಿ ಆಡಿದ ಮಾತಲ್ಲ ಎಂದು ಕೆಎಸ್ ಈಶ್ವರಪ್ಪ ಹೇಳಿದ್ದಾರೆ.
ನಾನು ಖಂಡಿತ ಮೋದಿ ವಿರುದ್ಧ ಅಲ್ಲ. ಮೋದಿ ಮೂರನೇ ಭಾರಿಗೆ ಪ್ರಧಾನಿಯಾಗುತ್ತಾರೆ ಎಂದು ಈಶ್ವರಪ್ಪ ಹೇಳಿದ್ದಾರೆ.