Monday, December 15, 2025

ಭಾರತ- ಆಫ್ರಿಕಾ ಮೂರನೇ ಮ್ಯಾಚ್: ಟಾಸ್ ಗೆದ್ದ ಸೂರ್ಯ ಬೌಲಿಂಗ್ ಆಯ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಮತ್ತು ದಕ್ಷಿಣ ಆಫ್ರಿಕಾ ಮೂರನೇ ಪಂದ್ಯಕ್ಕೆ ರೆಡಿಯಾಗಿದ್ದು, ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದೆ. ಇದರ ಜೊತೆಗೆ ಎರಡೂ ತಂಡಗಳ ಪ್ಲೇಯಿಂಗ್ 11 ಕೂಡ ಹೊರಬಿದ್ದಿದ್ದು, ಭಾರತ ತಂಡದಲ್ಲಿ 2 ಬದಲಾವಣೆಗಳಾಗಿದ್ದರೆ, ಆಫ್ರಿಕಾ ತಂಡದಲ್ಲಿ 3 ಬದಲಾವಣೆಗಳಾಗಿವೆ.

ಅಕ್ಷರ್ ಪಟೇಲ್ ಮತ್ತು ಜಸ್ಪ್ರೀತ್ ಬುಮ್ರಾ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅಕ್ಷರ್ ಆರೋಗ್ಯ ಹದಗೆಟ್ಟಿರುವುದರಿಂದ ಅವರು ಈ ಪಂದ್ಯದಲ್ಲಿ ಆಡುತ್ತಿಲ್ಲ. ಆದರೆ ಬುಮ್ರಾ ವೈಯಕ್ತಿಕ ಕಾರಣಗಳಿಂದ ಮನೆಗೆ ಹೋಗಬೇಕಾಗಿದ್ದು, ಅವರೂ ಕೂಡ ಈ ಪಂದ್ಯದಲ್ಲಿ ಆಡುತ್ತಿಲ್ಲ ಎಂದು ಸೂರ್ಯ ಹೇಳಿದ್ದಾರೆ. ಹೀಗಾಗಿ ಇವರಿಬ್ಬರ ಬದಲು ಕುಲ್ದೀಪ್ ಯಾದವ್ ಮತ್ತು ಹರ್ಷಿತ್ ರಾಣಾ ಈ ಪಂದ್ಯದಲ್ಲಿ ಆಡುತ್ತಿದ್ದಾರೆ. ಇತ್ತ ದಕ್ಷಿಣ ಆಫ್ರಿಕಾ ನಾಯಕ ಐಡೆನ್ ಮಾರ್ಕ್ರಾಮ್ ಕೂಡ ಪ್ಲೇಯಿಂಗ್ ಹನ್ನೊಂದರಲ್ಲಿ ಮೂರು ಬದಲಾವಣೆಗಳನ್ನು ಮಾಡಿರುವುದಾಗಿ ಹೇಳಿದರು.

ಉಭಯ ತಂಡಗಳು
ಭಾರತ ತಂಡ: ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲ್ದೀಪ್ ಯಾದವ್, ವರುಣ್ ಚಕ್ರವರ್ತಿ.

ದಕ್ಷಿಣ ಆಫ್ರಿಕಾ ತಂಡ: ರೀಜಾ ಹೆಂಡ್ರಿಕ್ಸ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಐಡೆನ್ ಮಾರ್ಕ್ರಾಮ್ (ನಾಯಕ), ಡೆವಾಲ್ಡ್ ಬ್ರೆವಿಸ್, ಟ್ರಿಸ್ಟಾನ್ ಸ್ಟಬ್ಸ್, ಡೊನೊವನ್ ಫೆರೆರಾ, ಮಾರ್ಕೊ ಯಾನ್ಸೆನ್, ಕಾರ್ಬಿನ್ ಬಾಷ್, ಆನ್ರಿಚ್ ನೋಕಿಯಾ, ಲುಂಗಿ ಎನ್ಡಿಗಿ, ಒಟೆನ್ಲೆ ಬಾರ್ಟ್‌ಮನ್.

error: Content is protected !!