ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………
ಹೊಸದಿಗಂತ ಆನ್ ಲೈನ್ ಡೆಸ್ಕ್:
ಅಫ್ಘಾನಿಸ್ಥಾನವನ್ನು ತಾಲಿಬಾನ್ ವಶಪಡಿಸಿಕೊಳ್ಳುವುದರ ಬಗ್ಗೆ ಭಾರತಕ್ಕೆ ಅಂದಾಜು ಇತ್ತು. ಆದರೆ ತ್ವರಿತಗತಿಯಲ್ಲಿ ನಡೆಸಿದ ಕಾರ್ಯಾಚರಣೆ ಆಶ್ಚರ್ಯಗೊಳಿಸಿದೆ ಎಂದು ಭಾರತೀಯ ರಕ್ಷಣಾ ಪಡೆಯ ಮುಖ್ಯಸ್ಥ ಬಿಪಿನ್ ರಾವತ್ ಹೇಳಿದ್ದಾರೆ.
ಈ ಬಗ್ಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ತಾಲಿಬಾನ್ ನ ಉದ್ದೇಶ ಕಳೆದ 20 ವರ್ಷಗಳಿಂದ ಹಾಗೆಯೇ ಇದೆ. ತಾಲಿಬಾನ್ ನಿಯಂತ್ರಣದಲ್ಲಿರುವ ಅಫ್ಘಾನಿಸ್ಥಾನದಿಂದ ಭಾರತದ ಮೇಲೆ ಯಾವುದೇ ರೀತಿಯ ಭಯೋತ್ಪಾದಕ ಚಟುವಟಿಕೆಗನ್ನು ನಡೆಸಲು ಬಿಡುವುದಿಲ್ಲ. ತಾಲಿಬಾನ್ ವಿರುದ್ಧ ಜಾಗತಿಕವಾಗಿ ಹೋರಾಡಲು ಕ್ವಾಡ್ ರಾಷ್ಟ್ರಗಳು ಜೊತೆಯಾಗಬೇಕು ಎಂದರು.
ಅಫ್ಘಾನಿಸ್ಥಾನದಿಂದ ಭಾರತಕ್ಕೆ ಭಯೋತ್ಪಾದಕ ಚಟುವಟಿಕೆಗಳ ಬಗ್ಗೆ ಮುಂಚೆಯೇ ಊಹಿಸಲಾಗಿದ್ದು, ಆದ್ದರಿಂದ ಮುಂದಿನ ದಿನಗಳಲ್ಲಿ ಎಲ್ಲಾ ರೀತಿಯಲ್ಲೂ ಉಗ್ರರನ್ನು ಎದುರಿಸಲು ಸಿದ್ಧರಿದ್ದೇವೆ ಎಂದರು.
ಭಾರತ ಈಗಾಗಲೇ ಅಫ್ಘಾನ್ ನಲ್ಲಿ ಸಿಲುಕಿರುವ ಪ್ರಜೆಗಳನ್ನು ಭಾರತಕ್ಕೆ ಕರೆತರುವ ಕೆಲಸ ನಡೆಸುತ್ತಿದೆ.
ಈ ವೇಳೆ ಅಮೆರಿಕದ ಇಂಡೊ-ಪೆಸಿಫಿಕ್ ಕಮಾಂಡ್ನ ಕಮಾಂಡರ್ ಅಡ್ಮಿರಲ್ ಜಾನ್ ಅಕ್ವಿಲಿನೊ ಕೂಡ ಇದ್ದರು.