ಭಾರತ-ಆಸ್ಟ್ರೇಲಿಯಾ ಅಂತಿಮ ಟೆಸ್ಟ್‌ ಡ್ರಾ: ಸರಣಿ ಗೆದ್ದ ರೋಹಿತ್ ಪಡೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್ :

ಭಾರತ ಹಾಗೂ ಆಸ್ಟ್ರೇಲಿಯಾನಡುವಿನ ಅಂತಿಮ ಟೆಸ್ಟ್‌ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿದೆ.

ಈ ಮೂಲಕ ಬಾರ್ಡರ್‌-ಗವಾಸ್ಕರ್ ಟೆಸ್ಟ್ ಸರಣಿಯನ್ನು ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ 2-1 ಅಂತರದಲ್ಲಿ ಜಯಿಸಿದೆ. ಮೊದಲೆರಡು ಟೆಸ್ಟ್‌ ಪಂದ್ಯವನ್ನು ಟೀಂ ಇಂಡಿಯಾ ಜಯಿಸಿತ್ತು. ಇದಾದ ಬಳಿಕ ಇಂದೋರ್‌ನಲ್ಲಿ ನಡೆದ ಮೂರನೇ ಟೆಸ್ಟ್‌ ಪಂದ್ಯವನ್ನು ಆಸ್ಟ್ರೇಲಿಯಾ 9 ವಿಕೆಟ್ ಜಯ ಸಾಧಿಸಿತ್ತು. ಇದೀಗ ಕೊನೆಯ ಪಂದ್ಯ ಡ್ರಾನಲ್ಲಿ ಅಂತ್ಯವಾಗಿದೆ.

ನಾಲ್ಕನೇ ಹಾಗೂ ಕೊನೆಯ ಟೆಸ್ಟ್‌ ಪಂದ್ಯದಲ್ಲಿ 88 ರನ್‌ಗಳ ಇನಿಂಗ್ಸ್‌ ಹಿನ್ನಡೆಯೊಂದಿಗೆ 5ನೇ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ತಂಡವು ಆರಂಭದಲ್ಲೇ ನೈಟ್‌ ವಾಚ್‌ಮನ್ ಮ್ಯಾಥ್ಯೂ ಕುಹ್ನೆಮನ್‌ ವಿಕೆಟ್ ಕಳೆದುಕೊಂಡಿತು. ಇದಾದ ಬಳಿಕ ಎರಡನೇ ವಿಕೆಟ್‌ಗೆ ಮಾರ್ನಸ್ ಲಬುಶೇನ್ ಹಾಗೂ ಟ್ರಾವಿಸ್ ಹೆಡ್‌ ಜವಾಬ್ದಾರಿಯುತ ಬ್ಯಾಟಿಂಗ್ ನಡೆಸುವ ಮೂಲಕ ತಂಡಕ್ಕೆ ಇನಿಂಗ್ಸ್‌ ಮುನ್ನಡೆ ಒದಗಿಸಿಕೊಡಲು ನೆರವಾದರು.

ಟ್ರಾವಿಸ್ ಹೆಡ್ 163 ಎಸೆತಗಳನ್ನು ಎದುರಿಸಿ 10 ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ 90 ರನ್ ಬಾರಿಸಿ ಅಕ್ಷರ್‌ ಪಟೇಲ್‌ಗೆ ವಿಕೆಟ್ ಒಪ್ಪಿಸಿದರು.

ಇನ್ನು ಮತ್ತೊಂದು ತುದಿಯಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ನಂ.1 ಟೆಸ್ಟ್‌ ಬ್ಯಾಟರ್ ಮಾರ್ನಸ್ ಲಬುಶೇನ್‌ 213 ಎಸೆತಗಳನ್ನು ಎದುರಿಸಿ 7 ಬೌಂಡರಿ ಸಹಿತ 63 ರನ್‌ ಬಾರಿಸಿದರು. ಇನ್ನು ಮತ್ತೊಂದು ತುದಿಯಲ್ಲಿ ನಾಯಕ ಸ್ಟೀವ್ ಸ್ಮಿತ್ 10 ರನ್‌ ಗಳಿಸಿದರು. ಆಸ್ಟ್ರೇಲಿಯಾ ತಂಡವು 78.1 ಓವರ್‌ಗಳಲ್ಲಿ 2 ವಿಕೆಟ್ ಕಳೆದುಕೊಂಡು 175 ರನ್‌ ಗಳಿಸಿತ್ತು. ಈ ಸಂದರ್ಭದಲ್ಲಿ ಪಂದ್ಯವನ್ನು ಡ್ರಾ ಎಂದು ಘೋಷಿಸಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!