Thursday, March 23, 2023

Latest Posts

ಇಂಡಿಯಾ-ಆಸ್ಟ್ರೇಲಿಯಾ ಎರಡನೇ ಟೆಸ್ಟ್: ಎಲ್ಲಾ ಟಿಕೆಟ್ ಸೋಲ್ಡ್ ಔಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ದೆಹಲಿಯಲ್ಲಿ ಮುಂದಿನ ಶುಕ್ರವಾರದಿಂದ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಎರಡನೇ ಪಂದ್ಯ ಆರಂಭವಾಗಲಿದೆ. ಇದಕ್ಕಾಗಿ ಅರುಣ್ ಜೇಟ್ಲಿ ಕ್ರೀಡಾಂಗಣ ಸಜ್ಜಾಗಿದೆ.

ಈ ಪಂದ್ಯಕ್ಕೆ ಸಾಕ್ಷಿಯಾಗಲು ಪ್ರೇಕ್ಷಕರು ತುದಿಗಾಲಲ್ಲಿ ನಿಂತಿದ್ದಾರೆ. ದೆಹಲಿ ಕ್ರೀಡಾಂಗಣದ ಎಲ್ಲಾ ಟಿಕೆಟ್‌ಗಳು ಕೂಡ ಪ್ರಮಾಣದಲ್ಲಿ ಮಾರಾಟವಾಗಿರುವುದಾಗಿ ಡಿಡಿಸಿಎ ಯ ಜೊತೆಕಾರ್ಯದರ್ಶಿ ರಾಜನ್ ಮಾಂಚಂಡ ಮಾಹಿತಿ ನೀಡಿದ್ದಾರೆ.

ಎಲ್ಲಾ ಟಿಕೆಟ್‌ಗಳು ಕೂಡ ಮಾರಾಟವಾಗಿದ್ದು ಕ್ರೀಡಾಂಗಣ ಭರ್ತಿಯಾಗುವ ನಿರೀಕ್ಷೆಯಿದೆ. ದೆಹಲಿಯಲ್ಲಿ ಸುದೀರ್ಘ ಕಾಲದ ಬಳಿಕ ಟೆಸ್ಟ್ ಪಂದ್ಯ ನಡೆಯುತ್ತಿರುವ ಕಾರಣ ಸಾಕಷ್ಟು ಕುತೂಹಲ ಮೂಡಿಸಿದೆ ಎಂದು ಡಿಡಿಸಿಎ ಜೊತೆಕಾರ್ಯದರ್ಶಿ ರಾಜನ್ ಮಾಂಚಂಡ ಮಾಹಿತಿ ನೀಡಿದ್ದಾರೆ.

ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂ ಸುಮಾರು 40000 ಪ್ರೇಕ್ಷಕರ ಸಾಮರ್ಥ್ಯವನ್ನು ಹೊಂದಿದೆ. ಬಾರ್ಡರ್ ಗವಾಸ್ಕರ್ ಟ್ರೋಫಿಯ ಎರಡನೇ ಪಂದ್ಯಕ್ಕಾಗಿ 24000 ಟಿಕೆಟ್‌ಗಳನ್ನು ಮಾರಾಟಕ್ಕೆ ಇಡಲಾಗಿತ್ತು. ಉಳಿದಂತೆ 8 ಸಾವಿರ ಟಿಕೆಟ್‌ಗಳನ್ನು ಡಿಡಿಸಿಎ ಸದಸ್ಯರಿಗೆ ಹಂಚಲಾಗಿದೆ. ಉಳೀದ ಸೀಟುಗಳನ್ನು ಪಂದ್ಯವನ್ನು ವೀಕ್ಷಿಸಲು ಆಗಮಿಸುವ ಗೌರವಾನ್ವಿತರಿಗಾಗಿ ಮೀಸಲಿರಿಸಲಾಗಿದೆ. ಒಂದು ಸ್ಟ್ಯಾಂಡನ್ನು ಪಂದ್ಯಕ್ಕೆ ಭದ್ರತೆ ಒದಗಿಸುವ ಸಿಬ್ಬಂದಿಗಳ ಕುಟುಂಬಗಳಿಗೆ ಮೀಸಲಿರಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!