ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಟೆಸ್ಟ್ ಸರಣಿಯಲ್ಲಿ ಎದುರಿಸಿದ ಸರಣಿ ಸೋಲಿಗೆ ಟೀಮ್ ಇಂಡಿಯಾ ಏಕದಿನ ಸರಣಿಯಲ್ಲಿ ಸೇಡು ತೀರಿಸಿಕೊಂಡಿದೆ. ಶನಿವಾರ ವಿಶಾಖಪಟ್ಟಣದಲ್ಲಿ ನಡೆದ ಮೂರು ಪಂದ್ಯಗಳ ಏಕದಿನ ಸರಣಿಯ 3ನೇ ಹಾಗೂ ಅಂತಿಮ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ಗೆಲುವು ದಾಖಲಿಸಿ ಸರಣಿ ವಶಪಡಿಸಿಕೊಂಡಿದೆ.
ಯಶಸ್ವಿ ಜೈಸ್ವಾಲ್ ಅವರ ಆಕರ್ಷಕ ಶತಕದೊಂದಿಗೆ 9 ವಿಕೆಟ್‌ಗಳಿಂದ ದಕ್ಷಿಣ ಆಫ್ರಿಕಾವನ್ನು ಸೋಲಿಸಿದೆ. ಆ ಮೂಲಕ ಮೂರು ಪಂದ್ಯಗಳ ಸರಣಿಯನ್ನು 2-1 ರಿಂದ ಗೆದ್ದುಕೊಂಡಿದೆ.
ಎಸಿಎ-ವಿಡಿಸಿಎ ಕ್ರಿಕೆಟ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 270 ರನ್‌ಗೆ ಆಲೌಟ್ ಆಯಿತು.
ಪ್ರತಿಯಾಗಿ ಟೀಮ್ ಇಂಡಿಯಾ ಯಶಸ್ವಿ ಜೈಸ್ವಾಲ್ 116 * , ರೋಹಿತ್ ಶರ್ಮ 75 ಹಾಗೂ ವಿರಾಟ್ ಕೊಹ್ಲಿ 65* ಸ್ಪೋಟಕ ಅರ್ಧಶತಕಗಳ ನೆರವಿನಿಂದ ಇನ್ನೂ 61 ಎಸೆತಗಳು ಬಾಕಿ ಇರುವಂತೆಯೇ 39.5 ಓವರ್‌ಗಳಲ್ಲಿ1 ವಿಕೆಟ್‌ಗೆ 271 ರನ್ ಬಾರಿಸಿ ಗೆಲುವು ಕಂಡಿತು.
ಇದು ನಾಯಕನಾಗಿ ಕೆಎಲ್ ರಾಹುಲ್ ಅವರ 2ನೇ ಏಕದಿನ ಸರಣಿ ಗೆಲುವು ಎನಿಸಿದೆ. ಇದಕ್ಕೂ ಮುನ್ನ ದಕ್ಷಿಣ ಆಫ್ರಿಕಾ ವಿರುದ್ಧವೇ 2023ರಲ್ಲಿ ಏಕದಿನ ಸರಣಿ ಗೆಲುವು ಕಂಡಿದ್ದರು.

