ASIA CUP 2023 | ಟೀಂ ಇಂಡಿಯಾ ಬೆಸ್ಟ್ ಬೌಲಿಂಗ್, ಲಂಕನ್ನರನ್ನು ಮಣಿಸಿ ಫೈನಲ್‌ಗೆ ಲಗ್ಗೆ ಇಟ್ಟ ಭಾರತ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಸೋಲಿಸಿ ಏಷ್ಯಾಕಪ್‌ನಲ್ಲಿ ಅಗ್ರಸ್ಥಾನಕ್ಕೇರಿದ ಟೀಂ ಇಂಡಿಯಾ, ಇದೀಗ ಶ್ರೀಲಂಕಾ ತಂಡವನ್ನು ಮಣಿಸಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದೆ.

ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಸೆಣೆಸಾಡಿದ್ದು, ಆತಿಥೇಯ ಶ್ರೀಲಂಕಾ ತಂಡವನ್ನು 41 ರನ್‌ಗಳಿಂದ ಸೋಲಿಸಿದೆ.

ಶ್ರೀಲಂಕಾ ವಿರುದ್ಧದ ಗೆಲುವಿನಿಂದ ಫೈನಲ್ ಪ್ರವೇಶಿಸಿದ ಮೊದಲ ತಂಡ ಭಾರತವಾಗಿದ್ದು, ರೋಹಿತ್ ಪಡೆಗೆ ಎಲ್ಲೆಡೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿತ್ತು 49.1 ಓವರ್‌ನಲ್ಲಿ 213 ರನ್‌ಗೆ ಆಲ್‌ಔಟ್ ಆಗಿತ್ತು. 214 ರನ್‌ಗಳ ಸಾಧಾರಣ ಮೊತ್ತ ಬೆನ್ನತ್ತಿದ ಲಂಕಾ 41.3 ಓವರ್‌ಗಳಲ್ಲಿ 172 ರನ್‌ಗೆ ಆಲ್‌ಔಟ್ ಆಗಿತ್ತು. ಈ ಮೂಲಕ ಭಾರತ ಫೈನಲ್‌ಗೆ ಲಗ್ಗೆಯಿಟ್ಟಿದ್ದು, ಫೈನಲ್ ಪಂದ್ಯ ರೋಚಕವಾಗಿರಲಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!