ಭಾರತ 5ನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆದಿರುವುದು ಅಸಾಮಾನ್ಯ ಸಾಧನೆ: ಪ್ರಧಾನಿ ಮೋದಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿ ಬೆಳೆದಿರುವುದು ಸಾಮಾನ್ಯ ಸಾಧನೆಯಲ್ಲ. ನಾವು ಈ ಉತ್ಸಾಹವನ್ನು ಉಳಿಸಿಕೊಳ್ಳಬೇಕಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಗುರುವಾರ ಗುಜರಾತ್‌ನ ಸೂರತ್ ನಗರದ ಓಲ್ಪಾಡ್ ಪ್ರದೇಶದಲ್ಲಿ ಆಯೋಜಿಸಲಾದ ವೈದ್ಯಕೀಯ ಶಿಬಿರದಲ್ಲಿ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು , ಭಾರತವು ವಿಶ್ವದ ಐದನೇ ಅತಿದೊಡ್ಡ ಆರ್ಥಿಕತೆಯಾಗಿದೆ. ಈ ಸಾಧನೆಯ ಈ ಅಮೃತ್ ಕಾಲದಲ್ಲಿ ಇನ್ನೂ ಹೆಚ್ಚು ಶ್ರಮಿಸಲು ಮತ್ತು ದೊಡ್ಡ ಗುರಿಗಳನ್ನು ಸಾಧಿಸಲು ನಮಗೆ ಆತ್ಮವಿಶ್ವಾಸವನ್ನು ನೀಡಿತು. ಈ ಪ್ರಗತಿ ಸಾಮಾನ್ಯವಾದುದಲ್ಲ. ಪ್ರತಿಯೊಬ್ಬ ಭಾರತೀಯನೂ ಅದರ ಬಗ್ಗೆ ಹೆಮ್ಮೆ ಪಡುತ್ತಿದ್ದಾನೆ. ನಾವು ಈ ಉತ್ಸಾಹವನ್ನು ಕಾಪಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು.
ಕೇಂದ್ರದ ಪ್ರಧಾನ ಮಂತ್ರಿ ಆವಾಸ್ ಯೋಜನೆ ಉಲ್ಲೇಖಿಸಿದ ಮೋದಿ, ಕಳೆದ ಎಂಟು ವರ್ಷಗಳಲ್ಲಿ ಬಡವರಿಗಾಗಿ ದೇಶಾದ್ಯಂತ ಸರ್ಕಾರವು ಮೂರು ಕೋಟಿ ಮನೆಗಳನ್ನು ನಿರ್ಮಿಸಿದೆ. ಇವುಗಳಲ್ಲಿ ಸುಮಾರು 10 ಲಕ್ಷ ಮನೆಗಳನ್ನು ಗುಜರಾತ್ ಒಂದರಲ್ಲೇ ನಿರ್ಮಿಸಲಾಗಿದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!