ಭಾರತ- ಭೂತಾನ್​ ನಡುವೆ ರೈಲು ಸೇವೆ: ಉಭಯ ದೇಶಗಳ ಪ್ರಧಾನಿಯಿಂದ ಒಡಂಬಡಿಕೆಗೆ ಸಹಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಭೂತಾನ್ (Bhutan) ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು ಶುಕ್ರವಾರ ಇಂಧನ, ವ್ಯಾಪಾರ, ಡಿಜಿಟಲ್ ಸಂಪರ್ಕ, ಬಾಹ್ಯಾಕಾಶ ಮತ್ತು ಕೃಷಿ ಕ್ಷೇತ್ರಗಳ ನಡುವಿನ ವಿನಿಯಮದ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ.

ಉಭಯ ದೇಶಗಳ ನಡುವೆ ರೈಲು ಸಂಪರ್ಕ (Railway Connection) ಸ್ಥಾಪಿಸುವ ತಿಳುವಳಿಕಾ ಒಡಂಬಡಿಕೆಗೆ ಸಹಿ ಹಾಕಿದ್ದು,ಈ ಮೂಲಕ ನೆರೆಯ ದೇಶಗಳ ನಡುವೆ ರೈಲು ಸಂಚಾರ ಆರಂಭವಾಗಲಿದೆ.

ಪ್ರಧಾನಿ ಮೋದಿ ಅವರು ಭೂತಾನ್ ಪ್ರಧಾನಿ ಥಿಂಪುವಿನಲ್ಲಿ ಆಯೋಜಿಸಿದ್ದ ಭೋಜನಕೂಟದ ವೇಳೆ ಭೇಟಿಯಾದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಭೂತಾನ್ ಪ್ರಧಾನಿ ಶೆರಿಂಗ್ ಟೊಬ್ಗೆ ಅವರ ಉಪಸ್ಥಿತಿಯಲ್ಲಿ ಈ ತಿಳುವಳಿಕಾ ಒಡಂಬಡಿಕೆಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು.

ಉಭಯ ನಾಯಕರು ದ್ವಿಪಕ್ಷೀಯ ಸಂಬಂಧಗಳ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ನವೀಕರಿಸಬಹುದಾದ ಇಂಧನ, ಕೃಷಿ, ಯುವ ವಿನಿಮಯ, ಪರಿಸರ ಮತ್ತು ಅರಣ್ಯ ಮತ್ತು ಪ್ರವಾಸೋದ್ಯಮದಂತಹ ಕ್ಷೇತ್ರಗಳಲ್ಲಿ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು ತಿಳುವಳಿಕೆ ರೂಪಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!