ಹೊಸದಿಗಂತ ಡಿಜಿಟಲ್ ಡೆಸ್ಕ್
ಜಮ್ಮು ಕಾಶ್ಮೀರ ಕುರಿತ ಚೀನಾದ ವಿದೇಶಾಂಗ ಸಚಿವ ವಾಂಗ್ ಯೀ ಅವರ ಹೇಳಿಕೆಗೆ ಭಾರತ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ನಮ್ಮ ಆಂತರಿಕ ವಿಚಾರಗಳ ಬಗ್ಗೆ ಇತರೆ ದೇಶಗಳು ಪ್ರತಿಕ್ರಿಯಿಸುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಚೀನಾಕ್ಕೆ ಸ್ಪಷ್ಟಮಾತುಗಳಲ್ಲಿ ತಿರುಗೇಟು ನೀಡಿದೆ.
ಪಾಕಿಸ್ತಾನದಲ್ಲಿ ಆಯೋಜಿಸಲಾದ ಆರ್ಗನೈಸೇಷನ್ ಆಫ್ ಇಸ್ಲಾಮಿಕ್ ಕೋಆಪರೇಷನ್ (ಒಐಸಿ) ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ್ದ ಚೀನಾದ ವಿದೇಶಾಂಗ ಸಚಿವ ವಾಂಗ್ ಯಿ, ಕಾಶ್ಮೀರ ಸಮಸ್ಯೆಯ ಬಗ್ಗೆ ನಮ್ಮ ಇಸ್ಲಾಮಿಕ್ ಸ್ನೇಹಿತರ ಮಾತುಗಳನ್ನು ನಾವು ಆಲಿಸಿದ್ದೇವೆ. ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯಗಳು ಮತ್ತು ದ್ವಿಪಕ್ಷೀಯ ಒಪ್ಪಂದಗಳಿಗೆ ಅನುಗುಣವಾಗಿ ಭಾರತವು ಕಾಶ್ಮೀರ ವಿವಾದವನ್ನು ಸೂಕ್ತವಾಗಿ ಮತ್ತು ಶಾಂತಿಯುತವಾಗಿ ಪರಿಹರಿಸಿಕೊಳ್ಳಬೇಕೆಂಬುದು ಚೀನಾದ ಬಯಕೆಯಾಗಿದೆ ಎಂದು ಹೇಳಿದ್ದರು.
ಚೀನಾ ಸಚಿವರ ಹೇಳಿಕೆ ಅಸಮಾಧಾನ ವ್ಯಕ್ತಪಡಿಸಿರುವ ಭಾರತ, ಜಮ್ಮು ಮತ್ತು ಕಾಶ್ಮೀರ ಭಾರತದ ಆಂತರಿಕ ವಿಷಯವಾಗಿದೆ. ಈ ವಿಚಾರದವಾಗಿ ಚೀನಾಕ್ಕೆ ಪ್ರತಿಕ್ರಿಯಿಸಲು ಯಾವುದೇ ಅಧಿಕಾರ ನಾವು ನೀಡಿಲ್ಲ, ನಮ್ಮಆಂತರಿಕ ವಿಚಾರದಲ್ಲಿ ಇತರ ದೇಶಗಳು ತಲೆದೂರಿಸುವುದನ್ನು ನಾವು ಸಹಿಸುವುದಿಲ್ಲ ಎಂದು ವಾಂಗ್ ಯಿ ಹೇಳಿಕೆಗೆ ತಿರುಗೇಟು ನೀಡಿದೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ