spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Friday, May 27, 2022

Latest Posts

ಅಫ್ಘಾನಿಸ್ತಾನಕ್ಕೆ ಮಾನವೀಯ ನೆರವು ನೀಡಲು ಭಾರತ ಬದ್ಧ: ವಿಶ್ವಸಂಸ್ಥೆಯಲ್ಲಿ ಭಾರತೀಯ ರಾಯಭಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಅಫ್ಘಾನಿಸ್ತಾನದ ಜನರಿಗೆ ಮಾನವೀಯ ನೆರವು ನೀಡುವ ವಿಚಾರದಲ್ಲಿ ನಾವು ದೃಢವಾಗಿದ್ದೇವೆ, ಈಗಾಗಲೇ ಹಲವು ಬಾರಿ ಅಫ್ಘಾನಿಸ್ತಾನಕ್ಕೆ ನೆರವು ನೀಡಿದ್ದೇವೆ ಎಂದು ವಿಶ್ವಸಂಸ್ಥೆಯ ಭಾರತೀಯ ರಾಯಭಾರಿ ಟಿ.ಎಸ್. ತಿರುಮೂರ್ತಿ ಹೇಳಿದ್ದಾರೆ.

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಸಭೆಯಲ್ಲಿ ಅಫ್ಘಾನಿಸ್ತಾನದ ಕುರಿತು ನಡೆದ ಚರ್ಚೆಯಲ್ಲಿ ಮಾತನಾಡಿ, ತಾಲಿಬಾನ್ ಆಡಳಿತದಲ್ಲಿರೋ ಅಫ್ಘಾನಿಸ್ತಾನದಕ್ಕೆ ಸಂಕಷ್ಟದಲ್ಲಿ ಸಹಾಯ ಮಾಡಲು, ಮಾನವೀಯ ನೆರವು ನೀಡಲು ಭಾರತ ಬದ್ಧ ಎಂದು ಹೇಳಿದ್ದಾರೆ.

ಅಫ್ಘಾನಿಸ್ತಾನದೊಂದಿಗೆ ಭಾರತಕ್ಕೆ ಐತಿಹಾಸಿಕ ಹಾಗೂ ಪ್ರಾಚೀನ ಸಂಬಂಧಗಳಿವೆ. ಆದರೆ ಆಫ್ಘನ್‌ನ ಇತ್ತೀಚಿನ ಬೆಳವಣಿಗೆಗಳು ಆತಂಕಕಾರಿಯಾಗಿವೆ ಎಂದಿದ್ದಾರೆ. ಕೊರೋನಾದಿಂದ ವಿಶ್ವವೇ ನಲುಗಿರುವಾಗ ಮೂರು ಹಡಗುಗಳಲ್ಲಿ ಔಷಧ ಮತ್ತು ಒಂದು ಮಿಲಿಯನ್ ಡೋಸ್ ಕೋವಿಡ್ ಲಸಿಕೆಯನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸಲಾಗಿದೆ ಎಂದಿದ್ದಾರೆ.

- Advertisement -

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss

Sitemap